Header Ads
Header Ads
Breaking News

ಬ್ಯಾರಿ ಸೌಹಾರ್ದ ಸಾಂಸ್ಕೃತಿಕ ಮೇಳ:ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು

ಬ್ಯಾರಿ ಸೌಹಾರ್ದ ಸಾಂಸ್ಕೃತಿಕ ಮೇಳ ಕಾರ್ಯಕ್ರಮವು ಕಿನ್ನಿಗೋಳಿಯ ಶಾಂತಿನಗರ ಗುತ್ತಕಾಡು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮೈದಾನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕರಂಬಾರು ಮುಹಮ್ಮದ್ ಅವರು ದಫ್ ಬಾರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರುಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್‌ರವರು ಶ್ರಮಜೀವಿಗಳಾದ ಬ್ಯಾರಿ ಸಮುದಾಯದ ಮಂದಿ ಈ ನಾಡಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕರಂಬಾರು ಮುಹಮ್ಮದ್ ಅವರು ದಫ್ ಬಾರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿ, ಸಾಹಿತ್ಯ ಉಳಿಸುವ ಜೊತೆಗೆ ಬ್ಯಾರಿ ಸಮುದಾಯದ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಕೆಲಸ ನಡೆಯುತ್ತಿರುವುದು ಅಭಿನಂದನೀಯ. ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗೂ ಹೆಚ್ಚು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ಜಿಲ್ಲೆಯಾದ್ಯಂತ ಇಂತಹ ಕಾರ್ಯಕ್ರಮ ಮಾಡುವಂತಾಗಲಿ ಎಂದರು.
ಇದೇ ಸಂದರ್ಭ ಕಿನ್ನಿಗೋಳಿ ಗ್ರಾಮ ಪಂಚಾಯತ್‌ನ ಹಿರಿಯ ಸದಸ್ಯರಾದ ಟಿ.ಎಚ್.ಮಯ್ಯದ್ದಿ ಅವರನ್ನು ಸನ್ಮಾನಿಸಲಾಯಿತು.ಸರಕಾರಿ ಪದವಿ ಪೂರ್ವ ಕಾಲೇಜು ಬಿ.ಮೂಡ ಇಲ್ಲಿನ ಉಪನ್ಯಾಸಕರಾದ ಅಬ್ದುಲ್ ರಝಾಕ್ ಅನಂತಾಡಿ ಅವರು ವಿಶೇಷ ಉಪನ್ಯಾಸ ನೀಡಿದರು.
ವೇದಿಕೆಯಲ್ಲಿ ತಾಲೂಕು ಪಂಚಾಯತ್ ಸದಸ್ಯ ದಿವಾಕರ ಕರ್ಕೇರ, ಮಾಜಿ ಎಪಿಎಂಸಿ ಅಧ್ಯಕ್ಷ ಪ್ರಮೋದ್ ಕುಮಾರ್, ಕಿನ್ನಿಗೋಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ, ಸದಸ್ಯೆ ವಾಣಿ, ಶ್ರೀಮೂಕಾಂಬಿಕಾ ದೇವಸ್ಥಾನ ಧರ್ಮದರ್ಶಿ ವಿವೇಕಾನಂದ, ನಾಗರಿಕ ಹಿತರಕ್ಷಣ ವೇದಿಕೆ ಅಧ್ಯಕ್ಷ ಟಿ.ಎ.ಹನೀಫ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ, ಗುತ್ತಿಗೆದಾರ ಬಿ.ಸೈದಾಲಿ, ಖಿಲ್ರಿಯಾ ಇಂಗ್ಲೀಷ್ ಮೀಡಿಯಂ ಪಬ್ಲಿಕ್ ಸ್ಕೂಲ್ ಸಂಚಾಲಕ ಟಿ.ಕೆ. ಅಬ್ದುಲ್ ಖಾದರ್ ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಹಲವು ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮ ನಡೆಯಿತು.

Related posts

Leave a Reply