Header Ads
Header Ads
Breaking News

ಬ್ರಹ್ಮಕಲಶೋತ್ಸವ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ಕುಡುಪು ನಾಗದೇವರ ಸಾನ್ನಿಧ್ಯ ಕ್ಷೇತ್ರ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯ

ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ ನಾಗಾರಾಧನೆಯ ಪ್ರಸಿದ್ಧ ಕ್ಷೇತ್ರವಾಗಿದ್ದು, ಬಹಳ ವರ್ಷಗಳ ಬಳಿಕ ಜೀರ್ಣೋದ್ಧಾರ ಕಾಣುತ್ತಿದೆ. ಸಮಗ್ರ ಭೂಮಿಯಲ್ಲಿ ನಾಗ ದೇವರ ಸಾನಿಧ್ಯವಿದೆ. ನಾಗದೇವರ ಸಾನಿಧ್ಯವಿರುವ ಕುಡುಪು ದೇವಸ್ಥಾನಕ್ಕೆ ವಿಶೇಷ ಸ್ಥಾನವಿದೆ ಎಂದು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ಅವರು ಕುಡುಪು ಅನಂತ ಪದ್ಮನಾಭ ದೇವಸ್ಥಾನದ ನಂತ ಪದ್ಮನಾಬ ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅಶೀವರ್ಚನ ನೀಡಿದರು.
ಶಾಸಕ ಜೆ. ಆರ್ ಲೋಬೋ ಮಾತನಾಡಿ, ಕುಡುಪು ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಡೆಯುವ ಪ್ರತಿಯೊಂದು ಕಾರ್ಯಗಳು ಉತ್ತಮವಾಗಿ ನಡೆಯುತ್ತವೆ ಎಂದು ಹೇಳಿದರು.ಈ ಸಂದರ್ಭ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್, ಉಪಮೇಯರ್ ರಜನೀಶ್, ಶಾಸಕ ಮೊಯ್ದಿನ್ ಬಾವಾ, ಧಾರ್ಮಿಕ ಪರಿಷತ್ ಸದಸ್ಯ ಪದ್ಮನಾಭ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ವರದಿ: ನಾಗೇಶ್ ಕಾವೂರು ಮಂಗಳೂರು

Related posts

Leave a Reply