Header Ads
Breaking News

ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನಡೆದ 67ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಸಮಾರೋಪ ಸಮಾರಂಭ

ಉಡುಪಿ : ಜಾನುವಾರು ಸಾಕಾಣಿಕೆಗೆ ಮಾಲಿನ್ಯ ನಿಯಂತ್ರಣ ಮಂಡಳಿ ಮೂಲಕ ಪೂರ್ವಾನುಮತಿ ಪಡೆಯಬೇಕೆನ್ನುವ ಹಸಿರು ಪೀಠದ ನಿರ್ದೆಶನವನ್ನು ಕೆ.ಎಂ.ಎಫ಼್ ಹಾಗೂ ಸಹಕಾರಿಗಳೆಲ್ಲರೂ ವಿರೋಧಿಸುತ್ತಾರೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅದ್ಯಕ್ಷ ಹಾಗೂ ದ.ಕ ಜಿಲ್ಲಾ ಸಹಕಾರಿ ಬ್ಯಾಂಕ್ ನ ಅದ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

 ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಇವುಗಳ ಜಂಟಿ ಆಶ್ರಯದಲ್ಲಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನಡೆದ 67ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಸಮಾರೋಪ ಹಾಗೂ ’ನಂದಿನಿ ಆನ್ ವೀಲ್ಸ್” ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಹಸಿರು ಪೀಠದ ಮೂಲ ಉದ್ದೇಶವೇ ತಪ್ಪು. ಇದರಿಂದ ಹೈನುಗಾರಿಕೆ ಹಾಗೂ ಹೈನುಗಾರರಿಗೆ ಸಮಸ್ಯೆ ಉಂಟಾಗಲಿದೆ. ಕೊರೋನಾ ಸಂಕಷ್ಟದ ಕಾಲದಲ್ಲಿ ಮೂರು ಸಹಕಾರಿ ಬ್ಯಾಂಕುಗಳು ಸದೃಢವಾಗಿದ್ದು ಜಿಲ್ಲೆಯ ರೈತರು ಕೇವಲ ಕೃಷಿಯೊಂದರಲ್ಲೇ ಅವಲಂಬಿತರಾಗದೇ ಹೈನುಗಾರಿಕೆ ಹಾಗೂ ತೋಟಗಾರಿಕೆ ಬೆಳೆಗಳನ್ನೂ ಬೆಳೆದು ಆರ್ಥಿಕವಾಗಿ ಸದೃಢರಾಗಿದ್ದಾರೆ ಹೀಗಾಗಿ ಕರಾವಳಿ ಜಿಲ್ಲೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ ಎಂದರು.

ಸಮಾರಂಭದ ಅದ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತನಾಡಿದ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅದ್ಯಕ್ಷ ರವಿರಾಜ್ ಹೆಗ್ಡೆ, ಪ್ರಸ್ತುತ ದಿನಗಳಲ್ಲಿ ಡಿಜಿಟಲೈಜೇಶನ್ ಅತ್ಯಂತ ಅಗತ್ಯ ಇದ್ದು ಈಗಾಗಲೇ ಡೀಲರ್ ಗಳಿಂದ ಮೊಬೈಲ್ ಆಪ್ ಮೂಲಕ ಇಂಡೆಂಡ್ ಪಡೆಯಲಾಗುತ್ತಿದೆ. ಇನ್ನು ಮುಂದೆ ಇದನ್ನ ಎಲ್ಲಾ ಸಹಕಾರಿ ಸಂಘಗಳಿಗೂ ಅಳವಡಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ಸಮಾರಂಭದಲ್ಲಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನ ಅದ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿದರು.

ಒಕ್ಕೂಟದ ಜಿಲ್ಲಾ ಮಟ್ಟದ ಅತ್ಯತ್ತಮ ಡೀಲರ್ ಗಳನ್ನು ಗುರುತಿಸಿ ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆ ತೋರಿದ ಹಾಲು ಉತ್ಪಾದಕರ ಮತ್ತು ಡೀಲರ್ ಗಳ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಮಾರಂಭದಲ್ಲಿ ಒಕ್ಕೂಟದ ಉಪಾದ್ಯಕ್ಷ ಪ್ರಕಾಶ್ಚಂದ್ರಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕ ಡಾ.ಎಸ್. ಟಿ ಸುರೇಶ್, ಡಿಸಿಸಿ ಬ್ಯಾಂಕ್ ನ ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ, ಹಾಗೂ ಒಕ್ಕೂಟದ ವಿವಿಧ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *