Header Ads
Header Ads
Breaking News

ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ. ಕುದ್ರೋಳಿಯ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ.

 ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕುದ್ರೋಳಿಯ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ನಡೆಯಿತು.ಇನ್ನು ಕಾರ್ಯಕ್ರಮದಲ್ಲಿ ಬ್ರಹ್ಮ ಶ್ರೀ ನಾರಾಯಣ ಮೇಯರ್ ಕೆ.ಭಾಸ್ಕರ್ ಮೊಯ್ಲಿ ಅವರು ಉದ್ಘಾಟಿಸಿದ್ರು.

ಬಳಿಕ ಮಾತನಾಡಿದ ಅವರು, ನಾರಾಯಣ ಗುರುಗಳ ತತ್ವ ಆದರ್ಶಗಳನ್ನ ಮೈಗೂಡಿಸಿಕೊಂಡಾಗ ಸುಂದರ ಸಮಾಜ ನಿರ್ಮಾಣವಾಗುತ್ತದೆ ಎಂದು ಹೇಳಿದರು. ಇನ್ನು ಕಾರ್ಯಕ್ರಮದಲ್ಲಿ ಶಾಸಕ ಡಿ.ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಿ, ಮಾತನಾಡಿದರು, ಹಿಂದುಳಿದ ವರ್ಗವನ್ನು ಸಮಾಜದ ಮುಖ್ಯವಾಹಿನಿಗೆ ತರಲು ನಾರಾಯಣ ಗುರುಗಳು ಅವಿರತ ಶ್ರಮ ವಹಿಸಿದ ಧೀಮಂತ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದರು. ಈ ವೇಳೆ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ, ಮಂಗಳೂರು ತಾಲೂಕು ತಹಶೀಲ್ದಾರ್ ಟಿ.ಜಿ ಗುರುಪ್ರಸಾದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯ ನಿರ್ದೇಶಕರಾದ ರಾಜೇಶ್ ಜಿ. ಉಪನ್ಯಾಸಕರಾದ ಡಾ|ಗಣೇಶ್ ಅಮೀನ್ ಸಂಕಮಾರ್ ಸೇರಿದಂತೆ ಇನ್ನಿತರು ಉಪಸ್ಥಿತಿರಿದ್ದರು.

Related posts

Leave a Reply