Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ಭಟ್ಕಳ ಪುರಸಭೆ ವ್ಯಾಪ್ತಿಯ ಒಳಚರಂಡಿ ಅವ್ಯವಸ್ಥೆ ಹಿನ್ನೆಲೆ ಜಿಲ್ಲಾಢಳಿತದ ವಿರುದ್ಧ ಸೆಪ್ಟೆಂಬರ್ ೧೮ರಂದು ಪ್ರತಿಭಟನೆ ಪುರಸಭಾ ಅಧ್ಯಕ್ಷ ಮಹ್ಮದ್ ಸಾದಿಕ್ ಹೇಳಿಕೆ

 

ಭಟ್ಕಳ ಪುರಸಭೆ ವ್ಯಾಪ್ತಿಯ ಒಳಚರಂಡಿ ಅವ್ಯವಸ್ಥೆ ಸಂಪೂರ್ಣ ವಿಫಲವಾಗಿದ್ದು, ಈ ಬಗ್ಗೆ ಸಭೆಯಲ್ಲಿ ಠರಾವು ಮಾಡಿ ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಸಹ ಕಳುಹಿಸಿದ್ದೇವೆ. ಈ ಬಗ್ಗೆ ಜಿಲ್ಲೆಯಿಂದ ತಾಂತ್ರಿಕ ತಂಡವನ್ನು ಕಳುಹಿಸುವುದಾಗಿ ಹೇಳಿದ್ದು ಸತತ ಎರಡು ಬಾರಿ ಬಾರದೇ ಇದ್ದ ಕಾರಣ ಸೆಪ್ಟೆಂಬರ್ ೧೮ರಂದು ಪುರಸಭಾ ಸದಸ್ಯರೆಲ್ಲ ಜಿಲ್ಲಾಢಳಿತದ ವಿರುದ್ಧ ಪುರಸಭೆಯ ಮುಂಭಾಗದಲ್ಲಿ ಸಾಮೂಹಿಕ ಪ್ರತಿಭಟನೆ ಮಾಡಲಿದ್ದೇವೆ.

ಎಂದು ಪುರಸಭಾ ಅಧ್ಯಕ್ಷ ಮಹ್ಮದ್ ಸಾದಿಕ್ ಮಟ್ಟಾ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಡಿಬಿ ನೆರವಿನಡಿಯಲ್ಲಿ ನಿರ್ಮಿಸಲಾದ ಒಳಚರಂಡಿ ವ್ಯವಸ್ಥೆ ಅವೈಜ್ಞಾನಿಕವಾಗಿದ್ದು, ಜನರಿಗೆ ಇದರಿಂದ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದು, ಜಿಲ್ಲಾಧಿಕಾರಿಗಳು ಯುಜಿಡಿ ಸಮಸ್ಯೆ ಪರಿಹಾರಕ್ಕೆ ಜಿಲ್ಲೆಯಿಂದ ನುರಿತ ತಾಂತ್ರಿಕ ತಂಡವನ್ನು ಕಳುಹಿಸುವುದಾಗಿ ಅವರು ತಿಳಿಸಿದರು.

Related posts

Leave a Reply