Header Ads
Header Ads
Breaking News

ಭಯೋತ್ಪಾದಕರನ್ನು ನಾವು ಮಟ್ಟ ಹಾಕುತ್ತೇವೆ : ಪ್ರಧಾನಿ ಮೋದಿ ಹೇಳಿಕೆ

ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಭಾರತವನ್ನು ಅಸ್ಥಿರಗೊಳಿಸಬಹುದು ಎಂದು ನೆರೆಯ ದೇಶ ಭಾವಿಸಿದರೆ ಅದನ್ನು ಮರೆತುಬಿಡಲಿ ಅದು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಪಾಕಿಸ್ತಾನಕ್ಕೆ ತಿರುಗೇಟು ನೀಡಿದರು.

ಭದ್ರತಾ ಪಡೆ ಯೋಧರ ಮೇಲೆ ದಾಳಿ ನಡೆಸಿ ಉಗ್ರರು ಭಾರೀ ದೊಡ್ಡ ತಪ್ಪು ಮಾಡಿದ್ದಾರೆ, ಅದಕ್ಕೆ ತಕ್ಕ ಬೆಲೆಯನ್ನು ಅವರು ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇಂತಹ ಕೃತ್ಯಗಳಿಂದ ಭಾರತವನ್ನು ಅಸ್ಥಿರಗೊಳಿಸಬಹುದು ಎಂದು ಭಾವಿಸಿದ್ದರೆ ಅದು ಸಾಧ್ಯವಿಲ್ಲ ಎಂದು ಕೂಡ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಇಂತಹ ಭಯೋತ್ಪಾದಕ ದಾಳಿಗಳಿಂದ ಭಾರತವನ್ನು ದುರ್ಬಲಗೊಳಿಸಬಹುದು ಎಂದು ನಮ್ಮ ನೆರೆಯ ರಾಷ್ಟ್ರ ಭಾವಿಸಿದೆ. ಅದು ಸಾಧ್ಯವಿಲ್ಲ ಎಂದರು. ಉಗ್ರರ ದಾಳಿಯಿಂದ ವೀರಯೋಧರು ಹುತಾತ್ಮರಾಗಿದ್ದು ನೋಡಿ ನಿಮ್ಮ ರಕ್ತ ಕುದಿಯುತ್ತಿರುತ್ತದೆ ಎಂದು ನನಗೆ ಗೊತ್ತಿದೆ. ಇದೊಂದು ಭಾವನಾತ್ಮಕ ಮತ್ತು ಸೂಕ್ಷ್ಮ ಸಮಯ. ಆಡಳಿತದಲ್ಲಿರಲಿ ಅಥವಾ ವಿರೋಧ ಪಕ್ಷದಲ್ಲಿರಲಿ ಈ ಸಂದರ್ಭದಲ್ಲಿ ನಾವು ರಾಜಕೀಯದಿಂದ ದೂರವುಳಿಯಬೇಕು.

ಜಗತ್ತಿನಿಂದ ಸಂಪೂರ್ಣವಾಗಿ ದೂರ ಉಳಿದಿರುವ ನಮ್ಮ ನೆರೆಯ ದೇಶ ತನ್ನ ತಂತ್ರ ಮತ್ತು ಪಿತೂರಿಯಿಂದ ಭಾರತವನ್ನು ಅಸ್ಥಿರಗೊಳಿಸಬಹುದು ಎಂದು ಭಾವಿಸಿದರೆ ಅದು ಖಂಡಿತಾ ಸಾಧ್ಯವಿಲ್ಲ ಎಂದು ಸಹ ಪ್ರಧಾನಿ ಸಂದೇಶ ರವಾನಿಸಿದರು.

Related posts

Leave a Reply

Your email address will not be published. Required fields are marked *