Header Ads
Header Ads
Header Ads
Header Ads
Header Ads
Header Ads
Breaking News

ದೆಹಲಿಯ ಜಂತರ್ ಮಂತರ್‌ನಲ್ಲಿ ಭಾರತ ಶಿಕ್ಷಣ ರಥಯಾತ್ರೆಯ ಸಮಾರೋಪ ಕಾರ್ಯಕ್ರಮ

ಬಂಟ್ವಾಳ: ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಹಾಗೂ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ ಒಂದೇ ದೇಶ ಒಂದೇ ಶಿಕ್ಷಣ ಜಾರಿಗಾಗಿ ಬೃಹತ್ ಧರಣಿ ಸತ್ಯಾಗ್ರಹ ಹಾಗೂ ಭಾರತ ಶಿಕ್ಷಣ ರಥಯಾತ್ರೆಯ ಸಮಾರೋಪ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಿತು.

ಧರಣಿ ಸತ್ಯಾಗ್ರಹವನ್ನು ಉದ್ದೇಶಿಸಿ ಮಂಗಳೂರು ಸಂಸದ ನಳೀನ್ ಕುಮಾರ್ ಕಟೀಲ್ ಮಾತನಾಡಿ ಬಂಟ್ವಾಳದ ಯುವಕರ ತಂಡವೊಂದು ಆದರ್ಶ ಶಾಲೆಯನ್ನು ನಿರ್ಮಿಸಿ ಎಲ್ಲರಿಗೂ ಸಮಾನ ಶಿಕ್ಷಣ ಸಿಗಬೇಕೆಂಬ ನಿಟ್ಟಿನಲ್ಲಿ ಗ್ರಾಮೀಣ ಭಾಗದಿಂದ ದೆಹಲಿಗೆ ಬಂದು ಹೋರಾಟ ನಡೆಸುತ್ತಿರುವುದು ಅಭಿನಂದನೀಯ, ದೇಶದಲ್ಲಿ ಹೊಸ ಶಿಕ್ಷಣ ನೀತಿ ಜಾರಿ ಬರುತ್ತಿರುವ ಈ ಸಂದರ್ಭದಲ್ಲಿ ಪ್ರಕಾಶ್ ಅಂಚನ್ ನೇತೃತ್ವದ ತಂಡ ಸಮಾನ ಶಿಕ್ಷಣ ಜಾರಿಗಾಗಿ ಭಾರತ ಶಿಕ್ಷಣ ರಥಯಾತ್ರೆ ನಡೆಸಿರುವುದು ಅರ್ಥಪೂರ್ಣ ಎಂದರು.
ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಮಾತನಾಡಿ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು ಕೇಂದ್ರ ಸರಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಒಂದೇ ಶಿಕ್ಷಣ ನೀತಿ ಜಾರಿ ಬಂದರೆ ಎಲ್ಲರಿಗೂ ಉಪಯೋಗವಾಗಲಿದೆ ಎಂದರು. ಸಣ್ಣ ವಯಸ್ಸಿನಲ್ಲಿ ಮಕ್ಕಳಿಗೆ ಹೆಚ್ಚು ಭಾಷೆ ಕಲಿಯುವ ಸಾಮರ್ಥ್ಯ ಇರುತ್ತದೆ. ಕನ್ನಡ ಮಾತ್ರ ಕಲಿತರೆ ಕರ್ನಾಟಕದಲ್ಲಿ ಮಾತ್ರ ಇರಬೇಕಾಷ್ಟೆ, ಹೆಚ್ಚು ಭಾಷೆಗಳನ್ನು ಕಲಿತರೆ ಪ್ರಪಂಚ ಜ್ಞಾನವೂ ಹೆಚ್ಚುತ್ತದೆ ಎಂದು ತಿಳಿಸಿದ ಅವರು ಪ್ರಕಾಶ್ ಅಂಚನ್ ನೇತೃತ್ವದ ತಂಡದ ಹೋರಾಟಕ್ಕೆ ಜಯ ಸಿಗಲಿ ಎಂದು ಶುಭ ಹಾರೈಸಿದರು.ಬೀದರ ಸಂಸದ ಭಗವಾನ್ ಕೂಬಾ ಧರಣಿಯಲ್ಲಿ ಪಾಲ್ಗೊಂಡರು.

ಭಾರತ ರಥಯಾತ್ರೆಯ ರುವಾರಿ ಪ್ರಕಾಶ್ ಅಂಚನ್ ಮಾತನಾಡಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ, ಸರಕಾರಿ ಶಾಲೆಗಳ ಉಳಿವಿಗಾಗಿ, ಎಲ್ಲಾ ರಾಜ್ಯಗಳ ಮಾತೃಭಾಷೆಯೊಂದಿಗೆ ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಕಲಿಕೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಭಾರತ ರಥಯಾತ್ರೆಯನ್ನು ನಡೆಸಲಾಗಿದೆ ಎಂದು ತಿಳಿಸಿದರು.ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿಯ ಕಾರ್ಯದರ್ಶಿ ಪುರುಷೋತ್ತಮ ಅಂಚನ್, ಕೋಶಾಧಿಕಾರಿ ಸಂದೀಪ್ ಸಾಲ್ಯಾನ್, ಉಪಾಧ್ಯಕ್ಷ ಮಯೂರ್ ಕೀರ್ತಿ, ಸದಸ್ಯರಾದ ರಾಮಚಂದ್ರ ಪೂಜಾರಿ, ಸಂತೋಷ್ ಕಟ್ಟೆ, , ನವೀನ್ ಸೇಸಗುರಿ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Related posts

Leave a Reply

Your email address will not be published. Required fields are marked *