Header Ads
Header Ads
Breaking News

ಭಾಷಣಗೈದು ಜನರ ಒಲವು ಗಳಿಸಲು ಸಾಧ್ಯವಿಲ್ಲ : ದಿನೇಶ್ ಗುಂಡುರಾವ್ ಹೇಳಿಕೆ

ಕೇವಲ ವೇದಿಕೆಗೆ ಹೆಚ್ಚಿನ ಆದ್ಯತೆ ನೀಡಿ ಭಾಷಣಗೈದು ಜನರ ಒಲವು ಗಳಿಸಲು ಸಾಧ್ಯವಿಲ್ಲ. ನೇರವಾಗಿ ಮತದಾರರಿಂದ ದೂರ ಸರಿದದ್ದೇ ಕಾಂಗ್ರೆಸ್ ಅಲ್ಪ ಹಿನ್ನಡೆಗೆ ಕಾರಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹೇಳಿದರು. ಅವರು ಸುರತ್ಕಲ್‌ನಲ್ಲಿರುವ ಮಂಗಳೂರು ಉತ್ತರ ವಿಧಾನಸಬಾ ಕ್ಷೇತ್ರದಲ್ಲಿ ಸುರತ್ಕಲ್ ಮತ್ತು ಗುರುಪುರ ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಈ ಸಂದರ್ಭ ಮಾಜಿ ಸಾಸಕ ಮೊಯಿದ್ದೀನ್ ಬಾವ, ಮಾಜಿ ಸಚಿವರಾದ ರಮಾನಾಥ ರೈ, ಯುಟಿ ಖಾದರ್, ವಿಧಾನಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಐವನ್ ಡಿಸೋಜಾ, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *