Header Ads
Header Ads
Header Ads
Breaking News

ಭಾಷಣದಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ ಅಭಿವೃದ್ಧಿ ಕೆಲಸ ಮಾಡಿ ತೋರಿಸಿದ್ರೆ ಅದು ಪ್ರಯೋಜನ ಬಂಟ್ವಾಳದಲ್ಲಿ ಸಚಿವ ರಮಾನಾಥ ರೈ ಅಭಿಪ್ರಾಯ

 

ಬಂಟ್ವಾಳ: ಭಾಷಣದಿಂದ ಏನನ್ನು ಸಾಧಿಸಿಲು ಸಾಧ್ಯವಿಲ್ಲ. ಅಭಿವೃದ್ದಿ ಕೆಲಸ ಮಾಡಿ ತೋರಿಸಿದರೆ ಮಾತ್ರ ಅದು ಪ್ರಯೋಜನಕಾರಿಯಾಗುತ್ತದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಹಲವಾರು ಜನಪಯೋಗಿ ಕಾರ್ಯಕ್ರಮಗಳನ್ನು ಜಾರಿಗೆ ಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಸಜೀಪಮುನ್ನೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ೯೪ಸಿಸಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸರಕಾರಿ ಜಮೀನಿನಲ್ಲಿ ಇರುವವರು ೯೪ಸಿಸಿಯಡಿ ಅರ್ಜಿ ಸಲ್ಲಿಸಲು ಇನ್ನೂ ಕಾಲವಕಾಶವನ್ನು ವಿಸ್ತರಣೆ ಮಾಡಲಾಗಿದೆ ಎಂದ ಸಚಿವ ರಮಾನಾಥ ರೈ ಶಾಸಕನಾಗಿ ಹಲವಾರು ಅಭಿವೃದ್ದಿ ಕಾರ್ಯಗಳನ್ನು ನಡೆಸಿದ್ದೇನೆ. ಅದನ್ನು ಸಹಿಸದವರು ಅಪಪ್ರಚಾರ ಮಾಡುತ್ತಿದ್ದಾರೆ. ಒಟ್ಟು ಅಭಿವೃದ್ದಿಯ ಕಾಲು ಭಾಗ ಕಾರ್ಯವು ಅಪಪ್ರಚಾರ ಮಾಡುವವರ ಅಧಿಕಾರವಧಿಯಲ್ಲಿ ನಡೆದಿಲ್ಲ ಎಂದು ಟೀಕಿಸಿದರು.
ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಸಜೀಪಮುನ್ನೂರು ಗ್ರಾ.ಪಂ. ಅಧ್ಯಕ್ಷ ಶರೀಫ್ ನಂದಾವರ, ಆರಾಧನ ಸಮಿತಿ ಸದಸ್ಯ ಯೂಸುಫ್ ಕರಂದಾಡಿ ಮತ್ತಿತರರು ಹಾಜರಿದ್ದರು. ಇದೇ ವೇಳೆ ವಿವಿಧ ರಸ್ತೆ ಅಭಿವೃದ್ದಿ ಕಾಮಗಾರಿಗಳನ್ನು ಸಚಿವರು ಉದ್ಘಾಟಿಸಿದರು.

ವರದಿ: ಸಂದೀಪ್ ಬಂಟ್ವಾಳ

Related posts

Leave a Reply