Header Ads
Breaking News

ಭ್ರಷ್ಟಚಾರ ಮುಕ್ತ ಭಾರತ ಎಂದರೆ ಕಾಂಗ್ರೆಸ್ ಮುಕ್ತ ಭಾರತ: ಸಂಸದ ನಳಿನ್

ಮೂಡುಬಿದಿರೆ: ಕಾಂಗ್ರೆಸ್ ಅಧಿಕಾರ ಅವಧಿಯಲ್ಲಿ ಕೋಟಿಗಟ್ಟಲೆ ಹಣವನ್ನು ಕೊಳ್ಳೆಹೊಡೆಯಲಾಗಿದೆ. ಭ್ರಷ್ಟಾಚಾರಕ್ಕೆ ಪರ್ಯಾಯ ಪದವೇ ಕಾಂಗ್ರೆಸ್. ಭ್ರಷ್ಟಾಚಾರ ಮುಕ್ತ ಭಾರತ ಎಂದರೆ, ಕಾಂಗ್ರೆಸ್ ಮುಕ್ತ ಭಾರತ ಎಂದು ಮಂಗಳೂರು ಲೋಕಸಭೆ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮಂಗಳೂರು – ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿ ವಿಳಂಬಕ್ಕೆ ಈ ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಶಾಸಕರಾಗಿದ್ದ ಅಭಯಚಂದ್ರ ಜೈನ್ ಮತ್ತು ಜೆ.ಆರ್ ಲೋಬೋ ಅವರೇ ಕಾರಣ. ಚತುಷ್ಪಥ ಹೆದ್ದಾರಿಯನ್ನು ದ್ವಿಪಥ ಹೆದ್ದಾರಿಯನ್ನಾಗಿ ಮಾಡಬೇಕೆಂದು ಈ ಮೂವರೂ ಪಟ್ಟು ಹಿಡಿದಿದ್ದು ಇದಕ್ಕೆ ಸಂಬಂಧಿಸಿದ ಮಹತ್ವದ ಸಭೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಹಲ್ಲೆಗೂ ಮುಂದಾಗಿದ್ದರು. ಇದಕ್ಕೆ ಸಂಬಂಧಿಸಿದ ಸ್ಪಷ್ಟ ದಾಖಲೆಗಳು ತಮ್ಮಲ್ಲಿದ್ದುಬಹಿರಂಗ ಚರ್ಚೆಗೆ ಬರಲಿ. ಚತುಷ್ಪಥ ರಸ್ತೆಗೆ ತಮಗೆ ಸಂಬಂಧಿಸಿದವರ ಜಾಗ ಸ್ವಾಧೀನವಾಗುತ್ತದೆ ಎಂಬ ಏಕೈಕ ಕಾರಣಕ್ಕೆ ಅಡ್ಡಿಪಡಿಸಿದ್ದಾರೆ. ಕೇಂದ್ರ ಸರ್ಕಾರದ ಈ ಯೋಜನೆಗೆ ರಾಜ್ಯ ಸರ್ಕಾರ ಭೂಸ್ವಾಧೀನಪಡಿಸಿಕೊಡಬೇಕು. ಅದಕ್ಕೂ ಈ ಮೂವರು ತಡೆಯೊಡ್ಡಿದ ಪರಿಣಾಮ ವಿಳಂಬವಾಗಿದೆ. ಈಗಿನ ರಾಜ್ಯ ಸರ್ಕಾರವು ಭೂಸ್ವಾಧೀನಕ್ಕೆ ಒಪ್ಪಿಗೆ ನೀಡಿದ್ದು ಮುಂದಿನ ಸೆಪ್ಟೆಂಬರ್‌ನಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಯಲಿದೆ. ಗುರುಪುರದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಸೇತುವೆಗೆ ಪರ್ಯಾಯಾವಾಗಿ ಹೊಸ ಸೇತುವೆ ನಿರ್ಮಾಣವಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಉಮಾನಾಥ ಕೋಟ್ಯಾನ್, ಬಿಜೆಪಿ ಮಂಡಲ ಅಧ್ಯಕ್ಷ ಈಶ್ವರ ಕಟೀಲು, ಜಿಲ್ಲಾ ಪ್ರಧಾನ ಕಾರ್‍ಯದರ್ಶಿ ಸುದರ್ಶನ್ ಎಂ, ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಂಡಲ ಪ್ರಧಾನ ಕಾರ್‍ಯದರ್ಶಿ ಸುಕೆಶ್ ಶೆಟ್ಟಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *