Header Ads
Breaking News

ಮಂಗಳೂರಲ್ಲಿ ಪ್ರಾಪರ್ಟಿ ಕಾರ್ಡ್ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

 ಮಂಗಳೂರು ದಕ್ಷಿಣ ಹಾಗೂ ಉತ್ತರ ವಿಧಾನ ಸಭಾಕ್ಷೇತ್ರದಲ್ಲಿ ಪ್ರಾಪರ್ಟಿ ಕಾರ್ಡ್ ಅವ್ಯವಸ್ಥೆಯನ್ನ ಖಂಡಿಸಿ ಇಂದು ಪ್ರತಿಭಟನೆ ನಡೆಯಿತು. ನಗರದ ಮಿನಿ ವಿಧಾನಸೌಧದ ಆವರಣದ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕರರು ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಪ್ರತಿಭಟನೆಯಲ್ಲಿ ಶಾಸಕ ಡಿ.ವೇದವ್ಯಾಸ್ ಕಾಮತ್ ಮಾತನಾಡಿ, ಮಂಗಳೂರಿನ ಜನತೆ ಪ್ರಾಪರ್ಟಿ ಕಾರ್ಡ್‌ನ ಅವ್ಯವಸ್ಥೆ ವಿರುದ್ಧ ರೋಸಿ ಹೋಗಿದ್ದಾರೆ, ಈ ಬಗೆ ಜಿಲ್ಲಾಡಳಿತ, ಸರ್ಕಾರದ ಗಮನಕ್ಕೂ ತಂದರೂ ಯಾವುದೇ ಪ್ರಯೋಜವಾಗಿಲ್ಲ, ಮುಂದಿನ ದಿನಗಳಲ್ಲಿ ಪ್ರಾಪರ್ಟಿ ಕಾರ್ಡ್‌ನ ಸಮಸ್ಯೆಯನ್ನ ಬಗೆಹರಿಸದೇ ಹೋದ್ರೆ ಉಗ್ರ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸರ್ಕಾರಕ್ಕೆ ಶಾಸಕರು ಎಚ್ಚರಿಕೆ ನೀಡಿದರು.ಈ ವೇಳೆ ಬಿಜೆಪಿ ಮುಖಂಡರಾದ ಮೋನಪ್ಪ ಭಂಡಾರಿ, ಮಾಜಿ ಕಾರ್ಪೋರೇಟರ್ ದಿವಾಕರ್ ಪಾಂಡೇಶ್ವರ್, ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *