Header Ads
Header Ads
Breaking News

ಮಂಗಳೂರಿಗೆ ಅಮಿತ್ ಶಾ ಸೋಮವಾರ ರಾತ್ರಿ ಆಗಮನ ಬಿಜೆಪಿ ಮುಖಂಡರು, ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ

ಬಿಜೆಪಿ ರಾಷ್ಟ್ರೀಯ ಅಧ್ಯಕ಼ ಅಮಿತ್ ಷಾ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರ ಅಭಿಯಾನಕ್ಕೆ ವಿಧ್ಯುಕ್ತ ಚಾಲನೆ ನೀಡಲು ಮಂಗಳೂರಿಗೆ ಸೋಮವಾರ ರಾತ್ರಿ ಆಗಮಿಸಿದ್ದಾರೆ. ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾಯಂಕಾಲ ಬಂದಿಳಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಬಿಜೆಪಿ ಮುಖಂಡರು, ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು.

ಉಭಯ ನಾಯಕರು ಪಕ್ಷಾಧ್ಯಕ್ಷರಿಗೆ ಶಾಲು ಹೊದಿಸಿ, ಪೇಟ ತೊಡಿಸಿ ಗೌರವಿಸಿದರು. ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲ್, ದ.ಕ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಉಡುಪಿ ಜಿಲ್ಲಾ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಾಜಿ ಸಚಿವ ಕೃಷ್ಣ.ಜೆ.ಪಾಲೇಮಾರ್, ನಗರ ದಕ್ಷಿಣ ಬಿಜೆಪಿ ಅಧ್ಯಕ್ಷ ವೇದವ್ಯಾಸ್ ಕಾಮತ್, ಉತ್ತರ ಅಧ್ಯಕ್ಷ ಡಾ.ವೈ.ಭರತ್ ಸೇರಿದಂತೆ ಮತ್ತಿತರು ಬಿಜೆಪಿ ನಾಯಕರು , ಮುಖಂಡರು ಭಾಗಿಯಾಗಿದ್ದರು.
ವರದಿ: ನಾಗೇಶ್ ಕಾವೂರು

Related posts

Leave a Reply