Header Ads
Breaking News

ಮಂಗಳೂರಿಗೆ ಆಗಮಿಸಿದ ಡಿ.ಕೆ. ಶಿವಕುಮಾರ್ : ದ.ಕ. ಜಿಲ್ಲೆಯ ಕಾಂಗ್ರೆಸ್ ನಾಯಕರಿಂದ ಸ್ವಾಗತ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅವರನ್ನು ಜಿಲ್ಲೆಯ ನಾಯಕರು ಸ್ವಾಗತಿಸಿ ಬರಮಾಡಿಕೊಂಡರು. ವಿಮಾನ ನಿಲ್ದಾಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, 15 ಕಾಂಗ್ರೆಸ್ ಶಾಸಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ನಾನು ಈ ವಿಚಾರಕ್ಕೆ ಹಾರೈಸುತ್ತೇನೆ. ಅವರು ಇಡೀ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿ. ಎಲ್ಲಾ 224 ಮಂದಿ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ನಾನು ಭಾವಿಸಿದೆ. ಆದರೆ ಅವರು ಕೇವಲ 15 ಶಾಸಕರನ್ನು ಮಾತ್ರ ಯಾಕೆ ಹೇಳುತ್ತಿದ್ದಾರೆಂದು ನನಗೆ ತಿಳಿದಿಲ್ಲ. ನಮ್ಮ ಗುರಿ ಪಕ್ಷ ಸಂಘಟನೆ. ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕರ್ತರೊಂದಿಗೆ ಇದೆ. ದೇಶಾದ್ಯಂತ ನಮ್ಮ ಕಾರ್ಯಕರ್ತರ ಸಹಾಯದಿಂದ ಪಕ್ಷವನ್ನು ನಿರ್ಮಿಸುತ್ತೇವೆ ಎಂದು ತಿರುಗೇಟು ನೀಡಿದರು

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ರಮಾನಾಥ ರೈ, ಶಾಸಕ ಯು.ಟಿ. ಖಾದರ್, ಮಾಜಿ ಶಾಸಕರಾದ ಅಭಯ ಚಂದ್ರ ಜೈನ್, ಐವನ್ ಡಿಸೋಜ, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *