Header Ads
Breaking News

ಮಂಗಳೂರಿನಲ್ಲಿ ಎಸಿಬಿ ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಸರಕಾರಿ ಅಧಿಕಾರಿಯ ಮನೆ ಮೇಲೆ ದಾಳಿ

ಇಂದು ಬೆಳ್ಳಂಬೆಳಗ್ಗೆ ಲೋಕೋಪಯೋಗಿ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ಶಾಕ್? ನೀಡಿದ್ದಾರೆ. ರಾಜ್ಯದ ವಿವಿಧ ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಎಇ ಮಹದೇವಪ್ಪಗೆ ಸೇರಿದ ಮಂಗಳೂರಿನ ಕದ್ರಿ ಕಂಬಳದಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆದಿದೆ.

ಎಸಿಬಿ ಎಸ್ಪಿ ಉಮಾಪ್ರಶಾಂತ್ ನೇತೃತ್ವದ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದ್ದು, ಮಹತ್ವದ ದಾಖಲೆ, ಸೊತ್ತುಗಳನ್ನು ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಸುಮಾರು ಒಂದೂವರೆ ಲಕ್ಷ ರೂಪಾಯಿ ಪತ್ತೆಯಾಗಿದೆ ಎನ್ನಲಾಗಿದೆ.ಇತ್ತ ಬೆಂಗಳೂರಿನ ಸಿದ್ದೇನಹಳ್ಳಿ, ಚಿತ್ರದುರ್ಗದ ಕಣಿವೆಯಲ್ಲಿರುವ ಮನೆಗಳಲ್ಲಿ ಎಸಿಬಿ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸುತ್ತಿದ್ದಾರೆ.

Related posts

Leave a Reply

Your email address will not be published. Required fields are marked *