Header Ads
Header Ads
Breaking News

ಮಂಗಳೂರು ವಕೀಲರ ಸಂಘ, ಸೇವಾ ಪ್ರಾಧಿಕಾರದಿಂದ ಕಾನೂನು ದಿನಾಚರಣೆ

ಮಂಗಳೂರು ವಕೀಲರ ಸಂಘ ಹಾಗೂ ಕಾನುನು ಸೇವಾ ಪ್ರಾಧಿಕಾರದ ವತಿಯಿಂದ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಕಾನೂನು ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಸಣ್ಣ ಹಾಗೂ ಅತಿ ಸೂಕ್ಷ್ಮ ವಿಚಾರಗಳನ್ನು ಕೂಡ ಗಂಭೀರವಾಗಿ ಪರಿಗಣಿಸಿತ್ತು. ತೀರ್ಪಿನ ಸಂಭಾವ್ಯ ಪರಿಣಾಮಗಳ ಬಗ್ಗೆಯೂ ಯೋಚನೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸುದೀರ್ಘ ಚಿಂತನೆ ನಡೆಸಿದ ಬಳಿಕವೇ ತೀರ್ಪು ಪ್ರಕಟಿಸಿದೆ ಎಂದು ಹೇಳಿದರು.  ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಡ್ಲೂರು ಸತ್ಯನಾರಾಯಣಾಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎನ್. ನರಸಿಂಹ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಎಚ್.ವಿ. ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *