Header Ads
Breaking News

ಮಂಗಳೂರಿನಲ್ಲಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ

ಕಾರ್ಮಿಕ ಸುಧಾರಣೆ, ವಿದೇಶಿ ನೇರ ಹೂಡಿಕೆ ಮತ್ತು ಖಾಸಗೀಕರಣ ಸೇರಿದಂತೆ ಕೇಂದ್ರ ಸರಕಾರದ ಕಾರ್ಮಿಕರ ವಿರೋಧಿ ನೀತಿಗಳ ವಿರುದ್ಧ ಮತ್ತು ಕನಿಷ್ಠ ವೇತನ ಹಾಗೂ ಸಾಮಾಜಿಕ ಸುರಕ್ಷತೆ ಸೇರಿದಂತೆ ಕಾರ್ಮಿಕ ವರ್ಗದ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರ ಒಕ್ಕೂಟಗಳ ಕರೆಯಂತೆ ನಗರದಲ್ಲಿ ಪ್ರತಿಭಟನೆ ನಡೆಯಿತು.

ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಗರದ ಪುರಭವನದ ಎದುರು ಜಮಾಯಿಸಿದ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ಸುಮಾರು14ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗವಹಿಸಿವೆ.ಇನ್ನೂ ಹಳೆ ಬಂದರು ಸಗಟು ಮಾರುಕಟ್ಟೆಯಲ್ಲಿ ಹಮಾಲಿ ಕಾರ್ಮಿಕರು ಮುಷ್ಕರವನ್ನು ಬೆಂಬಲಿಸಿದ್ದಾರೆ. ಇದರಿಂದ ದಿನಲೂ ಚಟುವಟಿಕೆಯಿಂದ ಕೂಡಿರುವ ಮಾರುಕಟ್ಟೆ ಇಂದು ಸ್ತಬ್ಧಗೊಂಡಿದೆ.

Related posts

Leave a Reply

Your email address will not be published. Required fields are marked *