Header Ads
Header Ads
Header Ads
Breaking News

ಮಂಗಳೂರಿನಲ್ಲಿ ಡಿ.20ರವರೆಗೆ ನಿಷೇಧಾಜ್ಞೆ-ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ಆದೇಶ

ಮಂಗಳೂರು: ಪೌರತ್ವ  ಕಾಯ್ದೆ  ಮತ್ತು ನಾಗರಿಕ ರಾಷ್ಟ್ರೀಯ ನೋಂದಣಿ  ವಿರೋಧಿಸಿ ಡಿ.19-20ರಂದು ವಿವಿಧ ಸಂಘ-ಸಂಸ್ಥೆ, ರಾಜಕೀಯ ಪಕ್ಷಗಳು ಪ್ರತಿಭಟನೆ ಹಮ್ಮಿಕೊಂಡಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಐಪಿಸಿ ಸೆಕ್ಷನ್ 144ರಂತೆ ಡಿ.18ರಂದು ರಾತ್ರಿ 9ರಿಂದ ಡಿ.20ರಂದು ರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಹೊರಡಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ಬುಧವಾರ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಸಮಯದಲ್ಲಿ ಶಸ್ತ್ರ, ದೊಣ್ಣೆ, ಕತ್ತಿ, ಈಟಿ, ಗದೆ, ಬಂದೂಕು, ಚಾಕು, ಕೋಲು-ಲಾಠಿ ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವಂತಿಲ್ಲ. ಪಟಾಕಿ ಸಿಡಿಸುವುದು, ಯಾವುದೇ ಸ್ಫೋಟಕ ಒಯ್ಯುವುದನ್ನು ನಿಷೇಧಿಸಲಾಗಿದೆ.
ಯಾವುದೇ ವಿಜಯೋತ್ಸವ ಸಾರ್ವಜನಿಕ ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ಸಾರ್ವಜನಿಕ-ರಾಜಕೀಯ ಸಭೆ ಸಮಾರಂಭ ಏರ್ಪಡಿಸುವಂತಿಲ್ಲ. ಕಲ್ಲು ಎಸೆಯುವುದು, ವೇಗದಿಂದ ಒಗೆಯುವ ಸಾಧನ-ಉಪಕರಣ ಶೇಖರಿಸುವುದು, ರವಾನೆ ಮಾಡುವುದನ್ನು ನಿಷೇಧಿಸಿದೆ.

ವ್ಯಕ್ತಿಗಳ ಅಥವಾ ಅವರ ಆಕೃತಿ-ಪ್ರತಿಕೃತಿ ಪ್ರದರ್ಶನ ಮಾಡುವಂತಿಲ್ಲ. ಅಪರಾಧ ಮಾಡಲು ಪ್ರಚೋದಿಸುವ ಬಹಿರಂಗ ಘೋಷಣೆ ಕೂಗುವುದು, ಹಾಡುವುದು, ಆವೇಷ ಭಾಷಣ ಮಾಡುವಂತಿಲ್ಲ. ಚಿತ್ರ, ಸಂಕೇತ, ಭಿತ್ತಿಪತ್ರ ಅಥವಾ ಇತರ ಯಾವುದೇ ವಸ್ತು-ಪದಾರ್ಥ ತಯಾರಿಸುವುದು, ಪ್ರದರ್ಶಿಸುವುದು, ಪ್ರಸಾರ ಮಾಡುವಂತಿಲ್ಲ ಎಂದು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಆದೇಶದಲ್ಲಿ ತಿಳಿಸಿದ್ದಾರೆ.

Related posts

Leave a Reply

Your email address will not be published. Required fields are marked *