Header Ads
Breaking News

ಮಂಗಳೂರಿನಲ್ಲಿ ನಡೆದ ಫೈರಿಂಗ್ ಪ್ರಕರಣ ಸಿಐಡಿ ತನಿಖೆಗೆ : ಬೆಂಗಳೂರಿನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯ ವೇಳೆ ಪೊಲೀಸರ ಗುಂಡೇಟಿಗೆ ಬಲಿಯಾದ ಪ್ರಕರಣದ ತನಿಖೆಯನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಿಐಡಿಗೆ ಒಪ್ಪಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಿ.ಎಸ್ ಯಡಿಯೂರಪ್ಪ ಅವರು, ಮಂಗಳೂರು ಗಲಭೆಯಲ್ಲಿ ನಡೆದ ಗೋಲಿಬಾರ್‌ನ ಬಗ್ಗೆ ನಾವು ಸಿಐಡಿ ತನಿಖೆಗೆ ಒಪ್ಪಿಸುತ್ತಿದ್ದೇವೆ ಎಂದರು. ಪೌರತ್ವ ತಿದ್ದುಪಡಿ ಕಾಯ್ದೆ ಉದ್ದೇಶಿಸಿ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಗುರುವಾರ ಹಿಂಸಾರೂಪ ತಲುಪಿತ್ತು. ಬಂದರ್ ಪೊಲೀಸ್ ಠಾಣೆಯ ಎದುರು ಹಿಂಸಾಚಾರದಲ್ಲಿ ಪೊಲೀಸರ ಗುಂಡೇಟಿಗೆ ಇಬ್ಬರು ಬಲಿಯಾಗಿದ್ದರು. ಶನಿವಾರ ಮಂಗಳೂರಿಗೆ ಭೇಟಿ ನೀಡಿದ್ದ ಸಿಎಂ ಯಡಿಯೂರಪ್ಪ, ಗೋಲಿಬಾರ್ ಅನಿವಾರ್ಯವಾಗಿತ್ತು ಎಂದಿದ್ದರು. ಮೃತರ ಕುಟುಂಬಿಕರಿಗೆ ತಲಾ ಹತ್ತು ಲಕ್ಷ ಪರಿಹಾರ ಘೋಷಿಸಿದ್ದರು.

Related posts

Leave a Reply

Your email address will not be published. Required fields are marked *