Header Ads
Header Ads
Header Ads
Breaking News

ಮಂಗಳೂರಿನಲ್ಲಿ ನಡೆದ ಹಿಂಸಾಚಾರ ಪ್ರಕರಣ : ಮೃತರ ಕುಟುಂಬಕ್ಕೆ ಮಮತಾ ಬ್ಯಾನರ್ಜಿ ಪರಿಹಾರ

ಮಂಗಳೂರಿನಲ್ಲಿ ಡಿ.19ರಂದು ಗೋಲಿಬಾರ್‌ಗೆ ಬಲಿಯಾದ ಇಬ್ಬರ ಕುಟುಂಬಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರಿಹಾರ ಘೋಷಿಸಿದ್ದು, ಅದರ ಚೆಕ್ ವಿತರಣೆಗಾಗಿ ತೃಣಮೂಲ ಕಾಂಗ್ರೆಸ್‌ನ ಇಬ್ಬರು ನಾಯಕರು ಇಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ್ದಾರೆ.ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳೂರಿನಲ್ಲಿ ಗೋಲಿಬಾರ್‌ಗೆ ಬಲಿಯಾದ ಮೃತರ ಕುಟುಂಬಕ್ಕೆ ತಲಾ ೫ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಅದರ ವಿತರಣೆಗಾಗಿ ತೃಣಮೂಲ ಕಾಂಗ್ರೆಸ್‌ನ ಮಾಜಿ ರೈಲ್ವೆ ಸಚಿವ ದಿನೇಶ್ ತ್ರಿವೇದಿ ಮತ್ತು ರಾಜ್ಯಸಭಾ ಸದಸ್ಯರಾದ ಎಂಡಿ ನದೀಮುಲ್ ಹಕ್ ಅವರು ಮಂಗಳೂರಿಗೆ ಆಗಮಿಸಿದ್ದಾರೆ.
ನಂತರ ಮಾತನಾಡಿದ ಅವರು ಮಂಗಳೂರಿನಲ್ಲಿ ನಡೆದ ಗೋಲಿಬಾರ್ ತುಂಬಾ ಬೇಸರದ ಘಟನೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ  ಮತ್ತು ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಎಲ್ಲೂ ಅದಕ್ಕಾಗಿ ಗೋಲಿಬಾರ್ ನಡೆದಿಲ್ಲ. ಮಂಗಳೂರಿನಲ್ಲಿ ನಡೆದ ಘಟನೆ ಅಮಾನವೀಯ ಕೃತ್ಯ. ಇದನ್ನು ನಾಗರಿಕ ಸಮಾಜ ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದರು.

Related posts

Leave a Reply

Your email address will not be published. Required fields are marked *