Header Ads
Header Ads
Breaking News

ಮಂಗಳೂರಿನಲ್ಲಿ ಪತ್ತೆಯಾಯಿತು ಮತ್ತೊಂದು ಗೋಲ್‌ಮಾಲ್. ೫ ಕ್ವಿಂಟಾಲ್‌ಗೂ ಅಧಿಕ ಅಕ್ಷರದಾಸೋಹದ ಅಕ್ಕಿ ಅಕ್ರಮ ಸಾಗಾಟ . ಆಹಾರ ಇಲಾಖೆ ಅಧಿಕಾರಿಗಳಿಂದ ದಾಳಿ, ಲಾರಿಸಹಿತ ಅಕ್ಕಿ ವಶಕ್ಕೆ.

ಮಂಗಳೂರಿನಲ್ಲಿ ಭಾರೀ ಅಕ್ರಮವೊಂದು ಪತ್ತೆಯಾಗಿದೆ. ರಾಜ್ಯ ಸರ್ಕಾರದ ಅಕ್ಷರದಾಸೋಹದ 5 ಕ್ವಿಂಟಾಲ್‌ಗೂ ಅಧಿಕ ಅಕ್ಕಿ ಅಕ್ರಮವಾಗಿ ಸಾಗಾಟವಾಗುತ್ತಿರುವುದನ್ನು ಪತ್ತೆಹಚ್ಚಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರಿನ ಬೋಂದೆಲ್‌ನಲ್ಲಿರುವ ರೈಸ್‌ಮಿಲ್‌ನಲ್ಲಿ ಅಕ್ರಮ ನಡೆಯುತ್ತಿತ್ತು. ಪದವಿನಂಗಡಿಯ ಪಡಿತರ ಅಂಗಡಿಗೆ ಸಾಗಾಟವಾಗಬೇಕಿದ್ದ ಅಕ್ಕಿಯನ್ನು ರೈಸ್‌ಮಿಲ್‌ಗೆ ತಂದು ಮೂಟೆ ಬದಲಾಯಿಸಿ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಈ ಅಕ್ರಮವನ್ನು ಪತ್ತೆಹಚ್ಚಿದ ಮಂಗಳೂರಿನ ಪಾಂಡೇಶ್ವರ ವಾರ್ಡ್‌ನ ಕಾರ್ಪೋರೇಟರ್ ದಿವಾಕರ್ ಮತ್ತು ಸಾಮಾಜಿಕ ಕಾರ್ಯಕರ್ತ ಹನುಮಂತ್ ಕಾಮತ್ ಈ ಬಗ್ಗೆ ಆಹಾರ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿ ಸುನಂದಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಕ್ರಮ ಅಕ್ಕಿ ದಾಸ್ತಾನು ಪತ್ತೆಹಚ್ಚಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

Related posts

Leave a Reply