Header Ads
Breaking News

ಮಂಗಳೂರಿನಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದಿಂದ ಪ್ರತಿಭಟನೆ

ಸರಕಾರ ಈಡಿ ಹಾಗೂ ಇತರ ಏಜೆನ್ಸಿಗಳನನು ಪಾಪ್ಯುಲರ್ ಫ್ರಂಟ್ ವಿರುದ್ಧ ಅಸ್ತ್ರವಾಗಿ ದುರ್ಬಳಕೆ ಮಾಡುವುದನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರವ್ಯಾಪ್ತಿ ಪ್ರತಿಭಟನೆ ಹಮ್ಮಿಕೊಂಡಿದ್ದು ಮಂಗಳೂರಿನಲ್ಲೂ ಪಿಎಫ್‍ಐ ವತಿಯಿಂದ ಪ್ರತಿಭಟನೆ ನಡೆಸಿದರು.ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಿಎಫ್‍ಐ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಅವರು, ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಸರಕಾರವನ್ನು ವಿರೋಧಿಸುವ ವ್ಯಕ್ತಿಗಳು, ಸಂಸ್ಥೆಗಳು ಮತ್ತು ಸಂಘಟನೆಗಳ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತು ಇತರ ಸರಕಾರಿ ಏಜೆನ್ಸಿಗಳನ್ನು ವ್ಯಾಪಕವಗಿ ದುರ್ಬಳಕೆ ಮಾಡುತ್ತಿರುವುದು ಕಂಡುಬರುತ್ತಿದೆ. ಈಡಿ ಮತ್ತು ಇತರ ಸರಕಾರಿ ಏಜೆನ್ಸಿಗಳು ಆಡಳಿತಾರೂಢ ಬಿಜೆಪಿ, ಆರ್‍ಎಸ್‍ಎಸ್ ಅಥವಾ ಯಾವುದೇ ಸಂಘಟನೆ, ವ್ಯಕ್ತಿಗಳ ಕೈಗಳಲ್ಲಿ ಅಸ್ತ್ರವಾಗಿ ಕಾರ್ಯಾಚರಿಸಬಾರದು. ಕಾನೂನು ರಕ್ಷಣೆಯ ಜವಾಬ್ದಾರಿಯನ್ನು ಪೂರೈಸುವ ನಿಟ್ಟಿನಲ್ಲಿ ಅದರ ದುರ್ಬಳಕೆಯನ್ನು ತಡೆಯಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪಿಎಫ್‍ಐ ರಾಜ್ಯ ಸಮಿತಿಯ ಸದಸ್ಯರಾದ ಅಶ್ರಫ್ ಎ.ಕೆ., ಇಝಾಜ್ ಅಹಮ್ಮದ್, ಮಾಜಿ ಮೇಯರ್ ಕೆ. ಆಶ್ರಪ್ ಮತ್ತಿತರರು ಹಾಜರಿದ್ದರು.

Related posts

Leave a Reply

Your email address will not be published. Required fields are marked *