Header Ads
Breaking News

ಮಂಗಳೂರಿನಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಸಿಪಿಎಂ ನೇತೃತ್ವದಲ್ಲಿ ಪ್ರತಿಭಟನೆ

ಲಾಕ್‍ಡೌನ್ ಸಂಧರ್ಭದಲ್ಲಿ ಜನತೆಗೆ ಆಹಾರ ಸಾಮಗ್ರಿಗಳನ್ನು, ಕೋರೋನ ಸೋಂಕಿತರಿಗೆ ಉಚಿತ ಚಿಕಿತ್ಸೆಯನ್ನು ಒದಗಿಸಬೇಕು ಹಾಗೂ ಸೀಲ್ ಡೌನ್ ಪ್ರದೇಶಗಳ ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು ಸಿಪಿಎಂ ನೇತೃತ್ವದಲ್ಲಿ ಭಿತ್ತಿಚಿತ್ರ ಪ್ರದರ್ಶಿಸುವ ಮೂಲಕ ಧರಣಿ ನಡೆಯಿತು.ಧರಣಿನಿರತರನ್ನುದ್ದೇಶಿಸಿ ಮಾತನಾಡಿದ ಡಿವೈಎಫ್ ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಈ ಹಿಂದಿನ ಲಾಕ್ ಡೌನ್ ನಿಂದಾಗಿ ದುಡಿಯುವ ವರ್ಗದ ಜನತೆ ತೀರಾ ಸಂಕಷ್ಟಗಳಿಗೆ ಒಳಗಾಗಿದ್ದು, ಈಗ ಮತ್ತೆ ವಿಧಿಸಿರುವ ಲಾಕ್ ಡೌನ್ ನಿಂದ ಕಂಗಾಲಾಗಿದ್ದಾರೆ. ಆದ್ದರಿಂದ ಉದ್ಯೋಗವಿಲ್ಲದೆ, ಕಾಸಿಲ್ಲದೆ, ಆಹಾರವಿಲ್ಲದೆ ಪರದಾಡುವ ತೀರಾ ಬಡ ಕಾರ್ಮಿಕರಿಗೆ ಅಹಾರ ಸಾಮಗ್ರಿಗಳನ್ನು ಜಿಲ್ಲಾಡಳಿತ ಒದಗಿಸಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಸಿಪಿಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮಂಡಳಿಯ ಸದಸ್ಯ ಜೆ.ಬಾಲಕ್ರಷ್ಣ, ಸಿಪಿಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್, ಸಿಪಿಎಂ ಜಿಲ್ಲಾ ನಾಯಕರಾದ ಜಯಂತಿ ಬಿ.ಶೆಟ್ಟಿ, ಸುರೇಶ್ ಬಜಾಲ್, ಮತ್ತಿತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು.

Related posts

Leave a Reply

Your email address will not be published. Required fields are marked *