Header Ads
Header Ads
Breaking News

ಮಂಗಳೂರಿನಲ್ಲಿ ವೈದ್ಯರ ಕರ್ತವ್ಯ ಲೋಪದ ಆರೋಪ, ಡಿವೈಎಫ್‌ಐಯಿಂದ ಜಿಲ್ಲಾಧಿಕಾರಿ ಕಚೇರಿಯೆದುರು ಪ್ರತಿಭಟನೆ

ಕರ್ತವ್ಯ ಲೋಪ ಎಸಗಿ ರೋಗಿಗಳನ್ನು ಸಂಕಷ್ಟಕ್ಕೆ ತಳ್ಳಿದ ವೈದ್ಯರುಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಮಂಗಳೂರಿನಲ್ಲಿ ಡಿವೈಎಫ್‌ಐ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ನಿರ್ಲಕ್ಷ್ಯ ತಾಳಿದ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದೇ ಇದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಅಂತಾ ಪ್ರತಿಭಟನಾಕಾರರು ಆಗ್ರಹಿಸಿದರು. ಖಾಸಗಿ ಆಸ್ಪತ್ರೆಯ ವೈದ್ಯರಾದ ಡಾ. ವೀಣಾ ಭಟ್ ಮತ್ತು ಡಾ. ಜಮೀಲ ಅವರು ಕರ್ತವ್ಯ ಲೋಪವೆಸಗಿದ ವೈದ್ಯರಾಗಿದ್ದಾರೆ ಎಂದು ಡಿವೈಎಫ್‌ಐ ಆರೋಪಿಸಿದೆ. ಪ್ರತಿಭಟನೆಯಲ್ಲಿ ಡಿವೈಎಫ್‌ಐ ಮುಖಂಡರಾದ ಇಮ್ತಿಯಾಜ್, ಸಂತೋಷ್ ಬಜಾಲ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

Related posts

Leave a Reply