Header Ads
Header Ads
Header Ads
Header Ads
Header Ads
Header Ads
Breaking News

ಮಂಗಳೂರಿನಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮದಾರರ ಶಿಬಿರ : ಹಲವು ಮಂದಿ ಉದ್ದಿಮೆದಾರರು ಶಿಬಿರದಲ್ಲಿ ಭಾಗಿ

 ಮಂಗಳೂರಿನ ಸಿಂಡಿಕೇಟ್ ಬ್ಯಾಂಕ್ ಪ್ರಾದೇಶಿಕ ಕಚೇರಿ ವತಿಯಿಂದ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರ ಶಿಬಿರವು ನಡೆಯಿತು. ಬೈಕಂಪಾಡಿ ಕೈಗಾರಿಕಾ ವಲಯದ ಕೆನರಾ ಸಣ್ಣಕೈಗಾರಿಕ ಸಂಘದ ಸಭಾಂಗಣದಲ್ಲಿ ಕಾರ್ಯಕ್ರಮವು ನಡೆಯಿತು.

 ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಮಂಗಳೂರಿನ ಮಂಗಳೂರಿನ ಸಿಂಡಿಕೇಟ್ ಬ್ಯಾಂಕ್ ಪ್ರಾದೇಶಿಕ ಕಚೇರಿ ವತಿಯಿಂದ ಎಂಎಸ್‌ಎಂಇ ಕ್ಯಾಂಪ್‌ನ್ನು ಆಯೋಜಿಸಲಾಗಿತ್ತು. ಬೈಕಂಪಾಡಿಯ ಕೆನರಾ ಸ್ಮಾಲ್ ಇಂಡಸ್ಟ್ರೀಸ್ ಅಸೋಸಿಯೇಷನ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಗಣ್ಯರನ್ನ ಮಂಗಳೂರು ವಿಭಾಗದ ಪ್ರಾದೇಶಿಕ ವ್ಯವಸ್ಥಾಪಕ ರಾಮಕಾಂತ್ ಭಟ್ ಅವರು ಸ್ವಾಗತಿಸಿದ್ರು.
 ಶಿಬಿರವನ್ನ ಕೆನರಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಗೌರವ್ ಹೆಗ್ಡೆ, ಅವರು ದೀಪ ಬೆಳಗಿಸಿ ಉದ್ಘಾಟಿಸಿದ್ರು. ಈ ವೇಳೆ ಮಾತನಾಡಿದ ಅವರು, ಸಣ್ಣ ಮತ್ತು ಮಧ್ಯಮ ಉದ್ದಿಮೆಗಾರರಿಗೆ ಸಾಲ ಸೌಲಭ್ಯ ನೀಡುವ ಕೆಲಸವನ್ನು ಸಿಂಡಿಕೇಟ್ ಬ್ಯಾಂಕ್ ಮಾಡುತ್ತಾ ಬಂದಿದೆ. ಮುಂದಕ್ಕೂ ಉದ್ದಿಮೆಗಾರರಿಗೆ ಹೆಚ್ಚಿನ ಮಾಹಿತಿ ಹಾಗೂ ಪ್ರೋತ್ಸಾಹ ನೀಡಬೇಕೆಂದು ಅವರು ಸಲಹೆ ನೀಡಿದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನ ಮಣಿಪಾಲ ವಿಭಾಗ ಕಚೇರಿಯ ಮ್ಯಾನೇಜರ್ ಭಾಸ್ಕರ್ ಹಂದೆ ಅವರು ವಹಿಸಿದ್ರು. ಈ ವೇಳೆ ಮಾತನಾಡಿದ ಅವರು, ದೇಶದ ಪ್ರಗತಿಯಲ್ಲಿ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ದಿಮೆಗಳು ಪ್ರಮುಖ ಪಾತ್ರವನ್ನು ವಹಿಸಿವೆ. ಸಿಂಡಿಕೇಟ್ ಬ್ಯಾಂಕ್ ಸೇರಿದಂತೆ ಇನ್ನಿತರ ಬ್ಯಾಂಕ್‌ಗಳು ಎಂಎಸ್‌ಎಂಇಗೆ ಹೆಚ್ಚಿನ ಮಹತ್ವ ಕೊಡುತ್ತಿದೆ ಅಂತಾ ಹೇಳಿದರು.
ಶಿಬಿರದಲ್ಲಿ ಕೆನರಾ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟೀನ ಅಧ್ಯಕ್ಷ ಅಬ್ದುಲ್ ಹಮೀದ್, ನಿಟ್ಟೆ ವಿಶ್ವವಿದ್ಯಾನಿಲಯ ಸಹ ಕುಲಪತಿ ಎಂ.ಎಸ್.ಮೂಡಿತ್ತಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಲವಾರು ಮಂದಿ ಉದ್ದಿಮೆಗಾರರು ಶಿಬಿರದಲ್ಲಿ ಭಾಗವಹಿಸಿದ್ದರು.

Related posts

Leave a Reply

Your email address will not be published. Required fields are marked *