Header Ads
Header Ads
Header Ads
Breaking News

ಮಂಗಳೂರಿನಲ್ಲಿ ಹಿಂಸಾಚಾರ ಪ್ರಕರಣ ಒಂದು ರೂಪಾಯಿ ಪರಿಹಾರವನ್ನೂ ಸರ್ಕಾರ ಕೊಡಲ್ಲ : ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ

ಮಂಗಳೂರಿನಲ್ಲಿ ನಡೆದ ಗಲಭೆಯಲ್ಲಿ ಮೃತಪಟ್ಟವರು ಅಂದು ನಡೆದ ಹಿಂಸಾಚಾರ ಪ್ರಕರಣದ ಆರೋಪಿಗಳಾಗಿದ್ದರೆ ಸಂತ್ರಸ್ತ ಕುಟುಂಬಗಳಿಗೆ ಯಾವುದೇ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಅವರು ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಗೋಲಿಬಾರ್‌ಗೆ ಬಲಿಯಾದವರು ಅಪರಾಧಿಗಳಾಗಿದ್ದರೆ ಪರಿಹಾರ ನೀಡುವುದು ಅಕ್ಷಮ್ಯ ಅಪರಾಧವಾಗುತ್ತದೆ. ಬಲಿಯಾದವರು ಹಿಂಸಾಚಾರದಲ್ಲಿ ಭಾಗಿಯಾಗಿರುವ ಶಂಕೆಯಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ. ಆದ್ದರಿಂದ ಸದ್ಯ ೧ ರೂ. ಪರಿಹಾರ ಕೂಡಾ ಕೊಡಲಾಗದು ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.

Related posts

Leave a Reply

Your email address will not be published. Required fields are marked *