Header Ads
Breaking News

ಮಂಗಳೂರಿನಲ್ಲಿ 71ನೇ ಗಣರಾಜ್ಯೋತ್ಸವದ ಸಂಭ್ರಮ:ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಮಂಗಳೂರಿನ ನೆಹರೂ ಮೈದಾನದಲ್ಲಿ ಗಣರಾಜ್ಯೋತ್ಸವ ಸಮಾರಂಭ ಹಾಗು ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನಿಸಲಾಯಿತು.

ಕಾರ್ಯಕ್ರಮದಲ್ಲಿ ಧ್ವಜಾರೋಹಣಗೈದು ನಂತರ ಮಾತನಾಡಿದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದುಷ್ಟಶಕ್ತಿಗಳು ತಲೆ ಎತ್ತದಂತೆ ಮಾಡುವುದರ ಜೊತೆಗೆ ಸರ್ವಧರ್ಮಗಳನ್ನು ಗೌರವಿಸಿ, ಸಮಾಜದ ಶಾಂತಿಗೆ ಭಂಗ ತರುವ ಚಟುವಟಿಕೆಗಳಿಗೆ ಅವಕಾಶ ಕೊಡದ ಸರ್ವಧರ್ಮೀಯರು ಸಮನ್ವಯದಲ್ಲಿ ಬಾಳಲು ಪ್ರತಿಜ್ಞೆ ಮಾಡೋಣ. ಜಿಲ್ಲೆಯಲ್ಲಿ ಕಳೆದ ಅತಿವೃಷ್ಟಿಯಿಂದ 893 ಕೋ.ರೂ. ನಷ್ಟವಾಗಿದೆ. ಆ ಪೈಕಿ 1914 ಕುಟುಂಬಗಳಿಗೆ ಆರ್ಥಿಕ ನೆರವು ನೀಡಲಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಲಾಯಿತು. ದ.ಕ. ಜಿಲ್ಲೆಯ 10 ಮಂದಿಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನಿಸಲಾಯಿತು ಹಾಗು 32 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಯುಟಿ ಖಾದರ್,ಭೋಜೇಗೌಡ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಬ್ಯಾರಿ ಅಕಾಡಮಿ ಅಧ್ಯಕ್ಷ ರಹೀಂ ಉಚ್ಚಿಲ್, ತುಳು ಅಕಾಡಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಐಜಿಪಿ ಅರುಣ್ ಚಕ್ರವರ್ತಿ, ಪೊಲೀಸ್ ಆಯುಕ್ತ ಡಾ. ಹರ್ಷ, ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಜಿಪಂ ಸಿಇಒ ಸೆಲ್ವಮಣಿ, ಎಸ್ಪಿ ಲಕ್ಷ್ಮಿಪ್ರಸಾಸ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *