Header Ads
Header Ads
Breaking News

ಮಂಗಳೂರಿನ ಅಶೋಕನಗರದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ

ಕಾರ್ಯಕ್ರಮದ ಉದ್ಘಾಟನೆಯನ್ನು ಅಂಗನವಾಡಿ ಕೇಂದ್ರದ ಪುಟಾಣಿ ಹೃದನ್ ನೆರವೇರಿಸಿದರು. ವೇದಿಕೆಯಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷರು ಹಾಗೂ ಸ್ಥಳೀಯ ಕಾರ್ಪೋರೇಟರ್ ನಾಗವೇಣಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಡಾ. ಪಲ್ಲವಿಯವರು H1N1 ಹಾಗೂ ಮಲೇರಿಯ ರೋಗಗಳ ಬಗ್ಗೆ ಮಾಹಿತಿ ನೀಡಿದರು. ಮಕ್ಕಳಿಗಾಗಿ ಹಲವು ಸ್ಪರ್ಧೆಗಳನ್ನು ಆಯೋಜಿಸಿದ್ದು ವಿಜೇತರಿಗೆ ಪ್ರಶಸ್ತಿಯನ್ನು Uಣ್ಯರು ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆ ಶಾರದಾ ಗೌಡ ಅವರನ್ನು ಸನ್ಮಾನಿಸಲಾಯಿತು.ಈ ಸಂದರ್ಭ ಕಾರ್ಯಕ್ರಮದಲ್ಲಿ ಅಶೋಕ ನಗರ ಮಹಿಳಾ ಮಂಡಲದ ಅಧ್ಯಕ್ಷರಾದ ರಾಮೇಶ್ವರ್ ಶೆಟ್ಟಿ, ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕಿನ ಶೈಲಾಜಾ, ಕಸಬಾ ಬೆಂಗರೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪಲ್ಲವಿ, ಬ್ರಾಮರಿ ಸ್ತ್ರಿಶಕ್ತಿ ಗುಂಪಿನ ಅಧ್ಯಕ್ಷರಾದ ಉಷಾಮ ಗೀತಾಂಜಲಿ, ಸ್ಥಳೀಯರಾದ ಲಲಿತ, ಜಯಕರ, ಯೋಗಿನಿಮ ರಾಜೇಶ್, ಒಡಿಯೂರು ಗ್ರಾಮ ವಿಕಾಸ ಯೋಜನೆಯ ಸಂಯೋಜಕ ಸುಮಲ್ ಹಾಗೂ ಶ್ರೀನಿವಾಸ್, ಬಾಲವಿಕಾಸ ಸಮಿತಿಯ ಪ್ರಧಾನ ಕಾರ್ಯದರ್ಶಿ ಚೇತನ್ ಕುಮಾರ್ ಉಪಸ್ಥಿತರಿದ್ದರು.

Related posts

Leave a Reply