Header Ads
Breaking News

ಮಂಗಳೂರಿನ ಐಟಿ ಕಚೇರಿ ಗೋವಾಕ್ಕೆ ಸ್ಥಳಾಂತರ : ಮಂಗಳೂರಿನಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್‍ನಿಂದ ಪ್ರತಿಭಟನೆ

ಮಂಗಳೂರು: ಮಂಗಳೂರಿನ ಐಟಿ ಕಚೇರಿಯನ್ನು ಗೋವಾಕ್ಕೆ ಸ್ಥಳಾಂತರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರಕಾರದ ನಿಲುವನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಮಿನಿವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಿದ್ರು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು, ಕಳೆದ ಆರು ವರ್ಷಗಳಿಂದ ಕೇಂದ್ರ ಸರಕಾರದ ಜಿಎಸ್‍ಟಿ, ನೋಟು ಅಮಾನ್ಯೀಕರಣ ಮೊದಲಾದ ನಿಲುವುಗಳಿಂದ ಜನಸಾಮಾನ್ಯರು ಕಂಗೆಟ್ಟಿದ್ದಾರೆ. ಇದೀಗ ಜಿಲ್ಲೆಯಲ್ಲಿದ್ದ ಐಟಿ ಕಚೇರಿಯನ್ನು ಗೋವಾಕ್ಕೆ ಸ್ಥಳಾಂತರಿಸುವ ಮೂಲಕ ಜಿಲ್ಲೆಯ ಜನತೆಗೆ ದ್ರೋಹ ಬಗೆಯಲಾಗಿದೆ. ಐಟಿ ಕಚೇರಿ ಸ್ಥಳಾಂತರಿಸುವ ಯತ್ನದೊಂದಿಗೆ ಬಿಜೆಪಿ ಸರಕಾರ ಜಿಲ್ಲೆಯ ನಾಲ್ಕು ಲಕ್ಷ ತೆರಿಗೆದಾರರಿಗೆ ಭಾರೀ ಅನ್ಯಾಯ ಮಾಡಿದೆ. ತಾನು ನಂಬರ್ ವನ್ ಸಂಸದ ಎಂದು ಸ್ವಯಂ ಘೋಷಿಸಿಕೊಂಡಿರುವ, ಬಿಜೆಪಿಯ ರಾಜ್ಯಾಧ್ಯಕರೂ ಆಗಿರುವ ನಳಿನ್ ಕುಮಾರ್ ಕಟೀಲ್‍ರವರಾಗಲಿ ಮೌನವಾಗಿದ್ದು, ಅವರು ರಾಜೀನಾಮೆ ನೀಡಬೇಕು ಎಂದರು. ಜಿಲ್ಲೆಯ ಏಳು ಮಂದಿ ಶಾಸಕರಾಗಲಿ ಈ ಬಗ್ಗೆ ಮೌನ ವಹಿಸುವ ಮೂಲಕ ಜಿಲ್ಲೆಯ ಜನರ ಸಂಕಷ್ಟಗಳನ್ನು ಕಡೆಗಣಿಸಿದ್ದಾರೆ ಎಂದು ಹರೀಶ್ ಕುಮಾರ್ ಆರೋಪಿಸಿದರು.ಈ ವೇಳೆ ಶಾಸಕ ಯು.ಟಿ. ಖಾದರ್, ಮಾಜಿ ಶಾಸಕರಾದ ಐವನ್ ಡಿಸೋಜ, ಜೆ ಅರ್ ಲೋಬೊ, ಮಾಜಿ ಸಚಿವ ಅಭಯಚಂದ್ರ ಜೈನ್, ಹಾಗೂ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Related posts

Leave a Reply

Your email address will not be published. Required fields are marked *