Header Ads
Header Ads
Breaking News

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಪುಣ್ಯ ತಿಥಿ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುಣ್ಯತಿಥಿಯನ್ನ ನಗರದ ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯ್ತು, ಮಾಜಿ ಸಚಿವ ರಮಾನಾಥ್ ರೈ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಕ್ಕೆ ಪುಪ್ಪನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ಬಿ.ಆರ್.ಅಂಬೇಡ್ಕರ್ ಸಮಾಜ ದುರ್ಬಲ ವರ್ಗದ ಜನರ ಶಕ್ತಿಯಾಗಿದ್ದರು. ಇನ್ನು ಸಿದ್ಧರಾಮಯ್ಯ ಸರ್ಕಾರ ಪರಿಶಿಷ್ಟ ಜಾತಿ- ಪಂಗಡಕ್ಕೆ ಹೆಚ್ಚಿನ ಅನುದಾನ ಮೀಸಲು ಇಡುವ ಕೆಲಸ ಮಾಡಿದೆ. ಇದೊಂದು ದೇಶಕ್ಕೆ ಮಾದರಿಯಾಗಿದೆ ಎಂದು ಅವರು ಹೇಳಿದರು. ಈ ವೇಳೆ ಜಿಲ್ಲಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಪಾಲಿಕೆ ಸದಸ್ಯ ರಾದ ಅಪ್ಪಿ, ರಜನೀಶ್ ಕಾಪಿಕಾಡ್, ಪ್ರತಿಭಾ ಕುಳಾಯಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು

Related posts

Leave a Reply