
ಮಂಗಳೂರಿನ ಕುಲಶೇಖರದಲ್ಲಿರುವ ಕುಲಾಲ ಸಮಾಜದ ಆಡಳಿತದಲ್ಲಿರುವ ಶ್ರೀ ವೀರನಾರಾಯಣ ದೇವಸ್ಥಾನ 5 ಕೋಟಿ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರ ಗೊಳ್ಳುತ್ತಿದ್ದು ಆ ಹಿನ್ನೆಲೆಯಲ್ಲಿ ಕೇರಳದ ವಾಸ್ತು ತಜ್ಞರಿಂದ ದೇವಸ್ಥಾನದ ವಾಸ್ತುವಿನ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಶೀಲಾ ಶಿಲ್ಪಿ ಮತ್ತು ದಾರುಶಿಲ್ಪಿ. ದೇವಸ್ಥಾನದ ಆಡಳಿತ ಸಮಿತಿಯ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಸೇವಾ ಟ್ರಸ್ಟಿನ ಪದಾಧಿಕಾರಿಗಳು, ಸೇವಾ ಸಮಿತಿಯ ಪದಾಧಿಕಾರಿಗಳು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ದೇವಸ್ಥಾನದ ಜೀರ್ಣೋದ್ಧಾರದ ಕೆಲಸ ವೇಗದಿಂದ ಸಾಗುತ್ತಿದ್ದು ಶೀಘ್ರದಲ್ಲಿ ಶ್ರೀ ಕ್ಷೇತ್ರದ ಪುನಃನಿರ್ಮಾಣದ ಶಿಲಾನ್ಯಾಸ ಕಾರ್ಯನಡೆಯಲಿದೆ.