Header Ads
Breaking News

ಮಂಗಳೂರಿನ ಜಿಲ್ಲಾಪಂಚಾಯತ್ ಮುಂಭಾಗದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು. ನಗರದ ಜಿಲ್ಲಾ ಪಂಚಾಯತ್‍ನ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಧರಣಿನಿರತರು ಘೋಷಣೆ ಕೂಗಿದರು. ಸಮಾನ ಕೆಲಸಕ್ಕೆ ಸಮಾನವೇತನ ನೀಡಬೇಕು. ಪ್ರತೀ ತಿಂಗಳ ಕೊನೆಗೆ ಆಯಾಯ ತಿಂಗಳ ವೇತನ ನೀಡಬೇಕು.ಇನ್ನು ಮಾರ್ಚ್ ತಿಂಗಳಲ್ಲಿ ಕೆಲಸ ಕೈಬಿಡದೇ ವರ್ಷ ಪೂರ್ತಿ ಕೆಲಸವನ್ನ ನೀಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷೆ ಚಂದ್ರಿಕಾ ಆಗ್ರಹಿಸಿದರು. ಡಿವೈಎಫ್‍ಐ ಮುಖಂಡ ದಯಾನಂದ ಶೆಟ್ಟಿ ಮಾತನಾಡಿ, ಅತಿಥಿ ಶಿಕ್ಷಕರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ತಕ್ಷಣವೇ ಸ್ಪಂದಿಸಬೇಕೆಂದು ಒತ್ತಾಯಿಸಿದ್ರು. ಈ ವೇಳೆ ಕಾರ್ಯದರ್ಶಿ ಚಿತ್ರಲೇಖಾ, ಜೊತೆ ಕಾರ್ಯದರ್ಶಿ ಸಂದೀಪ್ ಬೆಳ್ತಂಗಡಿ ಸೇರಿದಂತೆ ಮತ್ತಿತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು.

Related posts

Leave a Reply

Your email address will not be published. Required fields are marked *