Header Ads
Header Ads
Breaking News

ಮಂಗಳೂರಿನ ನೆಹರೂ ಮೈದಾನದಲ್ಲಿ ಫುಟ್ಬಾಲ್ ಪಂದ್ಯ. ಜುಲೈ24ರಿಂದ ಅಗಸ್ಟ್ 15ರವರೆಗೆ ಪುಟ್‌ಬಾಲ್ ಪಂದ್ಯಾಟ.

ಕಾಲೇಜು ಮಟ್ಟದಲ್ಲಿ ಪುಟ್‌ಬಾಲ್ ಆಟದಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಆಸಕ್ತಿ ಬೆಳೆಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಫುಟ್‌ಬಾಲ್ ಅಸೋಷಿಯೇಶನ್ ನೇತೃತ್ವದಲ್ಲಿ ಜುಲೈ 24ರಿಂದ ಅಗಸ್ಟ್ 15ರವರೆಗೆ ಪುಟ್‌ಬಾಲ್ ಪಂದ್ಯಾಟವು ನಗರದ ನೆಹರು ಮೈದಾನದಲ್ಲಿ ನಡೆಯಲಿದೆ.ಈ ಕುರಿತು ನಗರದ ಪತ್ರಿಕಾಭವನದಲ್ಲಿ ಮಾಹಿತಿ ನೀಡಿದ ಜಿಲ್ಲಾ ಪುಟ್‌ಬಾಲ್ ಸಂಸ್ಥೆಯ ಅಧ್ಯಕ್ಷರಾದ ಡಿ.ಎಂ ಅಸ್ಲಾಂ ಪುಟ್‌ಬಾಲ್ ಆಟದಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಆಸಕ್ತಿ ಬೆಳೆಯಲಿ ಮತ್ತು ಆ ಮೂಲಕ ವಿದ್ಯಾರ್ಥಿಗಳಲ್ಲಿರುವ ಪ್ರತಿಭಾವಂತ ಆಟಗಾರರನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಿವ ನಿಟ್ಟಿನಲ್ಲಿ 21 ವರ್ಷಗಳ ಹಿಂದೆ ದೇಶದ ೫೦ನೇ ಸ್ವಾಸಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸಂಸ್ಥೆ ಇಂಡಿಪೆಂಡೆನ್ಸ್ ಕಪ್ ಪುಟ್ಟಾಲ್ ಪಂದ್ಯಾವಳಿಯನ್ನು ಹುಟ್ಟು ಹಾಕಿದ್ದು ಈ ವರ್ಷ 22ನೇ ವರ್ಷದ ಪಂದ್ಯಕೂಟವನ್ನು ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಿದ್ದೇವೆ ಎಂದು ಮಾಹಿತಿ ನೀಡಿದರು.ಮಾಧ್ಯಮಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಪುಟ್ಟಾಲ್ ಸಂಸ್ಥೆಯ ಉಪಾಧ್ಯಕ್ಷರಾದ ವಿಜಯ ಸುವರ್ಣ, ದ.ಕ ಜಿಲ್ಲಾ ಪುಟ್ಪಾಲ್ ಸಂಸ್ಥೆಯ ಉಪಾದ್ಯಕ್ಷರಾದ ಮಹಮ್ಮದ್ ಹುಸೇನ್ ಬೋಳಾರ, ಇನ್ನಿತರರು ಉಪಸ್ಥಿತರಿದ್ದರು.

Related posts

Leave a Reply