Header Ads
Breaking News

ಮಂಗಳೂರಿನ ಪಂಪ್‌ವೆಲ್‌ನಲ್ಲಿ ಸರಣಿ ಅಪಘಾತ!!

ಮಂಗಳೂರಿನ ಪಂಪ್‌ವೆಲ್‌ನ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಸರಣಿ ಅಪಘಾತ ಸಂಭವಿಸಿದೆ. ನಗರದ ಪಂಪ್ವೆಲ್ ಸಮೀಪದಲ್ಲಿರುವ ಕರ್ನಾಟಕ ಬ್ಯಾಂಕ್ ಬಳಿ ಲಾರಿಯೊಂದು, ಕಾರಿಗೆ, ಕಾರು ಇನ್ನಿತರ ಎರಡು ಕಾರಿಗೆ ಢಿಕ್ಕಿ ಹೊಡಿದಿದೆ. ಸರಣಿ ಅಪಘಾತ ಮಹಿಳೆ, ಮಗು ಸೇರಿದಂತೆ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಿಂದಾಗಿ ಕೆಲ ಕಾಲ ಹೊತ್ತು ಟ್ರಾಫಿಕ್ ಜಾಮ್ ಆಗಿದ್ದು, ಪೊಲೀಸರು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಕುರಿತು ಕದ್ರಿ ಟ್ರಾಫಿಕ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Related posts

Leave a Reply

Your email address will not be published. Required fields are marked *