Breaking News

ಮಂಗಳೂರಿನ ಪಿಲಿಕುಳದಲ್ಲಿ ಮೀನು ಹಬ್ಬ, ಸಚಿವ ಪ್ರಮೋದ್ ಮಧ್ವರಾಜ್‌ರಿಂದ ಚಾಲನೆ


ಮೀನುಗಾರಿಕೆ ಇಲಾಖೆ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಮೀನು ಹಬ್ಬ ಮತ್ತು ಕ್ರೇತ್ಸೋತ್ಸವ ಕಾರ್ಯಕ್ರಮ ಮಂಗಳೂರಿನ ಪಿಲಿಕುಳದಲ್ಲಿ ನಡೆಯಿತು.
ಈ ವೇಳೆ ರಾಜ್ಯ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಪಿಲಿಕುಳದಲ್ಲಿ ಮತ್ಸ್ಯ ಅಭಿವೃದ್ಧಿ ಯೋಜನೆಗೆ ಸರ್ಕಾರದಿಂದ ೨೦ ಕೋಟಿ ರೂ. ಯೋಜನೆಗೆ ಮಂಜೂರಾತಿ ದೊರೆತಿದೆ. ಈಗಾಗಲೇ ೧೦ ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಶಾಸಕ ಜೆ. ಆರ್. ಲೋಬೊ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply