Header Ads
Breaking News

ಮಂಗಳೂರಿನ ಬಿಕರ್ನಕಟ್ಟೆಯ ಕಾರ್ಮೆಲ್ ಹಿಲ್‍ನಲ್ಲಿರುವ ಬಾಲ ಯೇಸುವಿನ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ

ಮಂಗಳೂರಿನ ಬಿಕರ್ನಕಟ್ಟೆಯ ಕಾರ್ಮೆಲ್ ಹಿಲ್‍ನಲ್ಲಿರುವ ಬಾಲ ಯೇಸುವಿನ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವವನ್ನು ಜನವರಿ 14, 15 ಮತ್ತು 16ರಂದು ವಿಜೃಂಭಣೆಯಿಂದ ನಡೆಸಲಾಗುವುದು ಎಂದು ಬಾಲಯೇಸುವಿನ ಪುಣ್ಯಕ್ಷೇತ್ರದ ನಿರ್ದೇಶಕರಾದ ವಂದನೀಯ ಸ್ವಾಮಿ ರೋವೆಲ್ ಡಿಸೋಜಾ ತಿಳಿಸಿದರು.ಈ ಬಗ್ಗೆ ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಜನವರಿ 14ರಂದು ವಾರ್ಷಿಕ ಮಹೋತ್ಸವ ಸಾಂಭ್ರಮಿಕ ಬಲಿಪೂಜೆಗಳು ನಡೆಯಲಿವೆ. ಜನವರಿ 15ರಂದು ಮಹೋತ್ಸವದ ಸಾಂಭ್ರಮಿಕ ಬಲಿಪೂಜೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಪೀಟರ್ ಪಾವ್ಲ್ ಸಲ್ಡಾನಾ, ವಂದನೀಯ ಮ್ಯಾಕ್ಸಿಮ್ ನೊರೊನ್ಹಾ, ವಿಕಾರ್ ಜೆರಾಲ್ ಅಧ್ಯಕ್ಷತೆಯಲ್ಲಿ ಅರ್ಪಿಸಲಾಗುವುದು. ಮೂರು ದಿನಗಳ ವಾರ್ಷಿಕ ಮಹೋತ್ಸವಕ್ಕಾಗಿ ನವದಿನಗಳ ಸಿದ್ಧತೆ ನೋವೇನಾ ಪ್ರಾರ್ಥನೆ ನಡೆಯಲಿದೆ. ವಾರ್ಷಿಕ ಮಹೋತ್ಸವಕ್ಕೆ ಜನವರಿ 4ರಂದು ವಿದ್ಯುಕ್ತ ಚಾಲನೆಯನ್ನು ನೀಡಲಾಗುವುದು. ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ವಹಿಸಿಕೊಂಡು ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಮಾಹಿತಿ ನೀಡಿದರು.ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಬಾಲಯೇಸು ಪುಣ್ಯಕ್ಷೇತ್ರದ ಉಪ ಮಠಾಧೀಶರಾದ ವಂದನೀಯ ಸ್ವಾಮಿ ಲ್ಯಾನ್ಸಿ ಲುವಿಸ್, ಪತ್ರಕರ್ತರಾದ ಸ್ಟ್ಯಾನ್ಲಿ ಬಂಟ್ವಾಳ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *