Header Ads
Breaking News

ಮಂಗಳೂರಿನ ಮಾಲ್‌ನಲ್ಲಿ ನಡೆದ ಹಲ್ಲೆ ಪ್ರಕರಣ ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದೇವೆ : ಡಾ.ಪಿ.ಎಸ್.ಹರ್ಷ ಹೇಳಿಕೆ

ಮಂಗಳೂರಿನ ಮಾಲ್‌ನಲ್ಲಿ ನಡೆದ ಯುವಕನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಹರ್ಷ ಪಿ.ಎಸ್. ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಫಿಝಾ ಮಾಲ್‌ನ ಫುಡ್ ಕೋರ್ಟ್‌ನಲ್ಲಿ ಈ ಘಟನೆ ನಡೆದಿದೆ. ಮಂಜುನಾಥ್ ಎಂಬಾತ ಟೀ ಕುಡಿಯುತ್ತಿದ್ದ. ಈ ವೇಳೆ ಪಕ್ಕದಲ್ಲಿದ್ದ ಇನ್ನೊಂದು ಯುವಕರ ಗುಂಪಿನ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತು ಬೆಳೆದು ಹಲ್ಲೆಯಾಗಿದೆ. ಈ ಬಗ್ಗೆ ಮಂಗಳೂರಿನ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಥಮ ಹಂತದಲ್ಲಿ ಒಟ್ಟು ನಾಲ್ವರನ್ನು ಬಂಧಿಸಿದ್ದೇವೆ ಎಂದು ಹೇಳಿದರು.

ಇನ್ನು ಭದ್ರತೆ ಹಿನ್ನೆಲೆಯಲ್ಲಿ ಮಂಗಳೂರಿನ ಆಯಾಕಟ್ಟಿನ ಸ್ಥಳಗಳಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಇನ್ನು ಹಲ್ಲೆಗೊಳಗಾದ ಯುವಕ ಮಂಜುನಾಥ್ ವಿಮಾ ಏಜೆಂಟ್. ಈತನ ಮೇಲೆ ಯಾವುದೇ ಕೇಸ್ ದಾಖಲಾಗಿಲ್ಲ. ಈತನ ವಿರುದ್ಧ ಯಾರು ಲಿಖಿತ ದೂರು ಕೊಟ್ಟಿಲ್ಲ. ಯಾರೇ ದೂರು ಕೊಟ್ಟರೂ ನಾವು ಸ್ವೀಕರಿಸುತ್ತೇವೆ. ನಾವೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸುವ ಅಂಶ ಕಂಡು ಬಂದಿಲ್ಲ ಎಂದು ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ಹೇಳಿದ್ರು.

Related posts

Leave a Reply

Your email address will not be published. Required fields are marked *