Header Ads
Header Ads
Breaking News

ಮಂಗಳೂರಿನ ಲಾಲ್ ಬಾಗ್ ಪತ್ರಿಕಾ ಭವನದಲ್ಲಿ ನನ್ನ ಜಿಲ್ಲೆ-ನನ್ನ ಕನಸು ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದವತಿಯಿಂದ ಬ್ರಾಂಡ್ ಮಂಗಳೂರು ಕಾರ್ಯಕ್ರಮದ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ‘ನನ್ನ ಜಿಲ್ಲೆ-ನನ್ನ ಕನಸು’ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ಕಾರ್ಯಕ್ರಮ ನಡೆಯಿತು. ಮಂಗಳೂರು ನಗರ ಪೋಲಿಸ್ ಆಯುಕ್ತರಾದ ಟಿ. ಆರ್. ಸುರೇಶ್ ಅವರೊಂದಿಗೆ ಪತ್ರಕರ್ತರ ಸಂವಾದ ಕಾರ್ಯಕ್ರಮ ಮಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು.

ಪ್ರಬಂಧ ಸ್ಪರ್ಧೆಯಲ್ಲಿ ಪದವಿ ವಿಭಾಗದಲ್ಲಿ ಮಂಗಳೂರು ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ವಾಣಿಯವರಯ ಪ್ರಥಮ ಹಾಗೂ ಮಂಗಳೂರು ಕರಾವಳಿ ಫಾರ್ಮಸಿ ಕಾಲೇಜಿನ ಆಯಿಶತ್ ಸಫ್ವಾನ ದ್ವಿತೀಯ ಬಹುಮಾನ ಪಡೆದಿರುತ್ತಾರೆ.

ಪದವಿ ಪೂರ್ವ ವಿಭಾಗದಲ್ಲಿ ಮಂಗಳೂರು ಸಂತ ಆಗ್ನೆಸ್ ಪದವಿ ಪೂರ್ವ ಕಾಲೇಜಿನ ಎನ್. ಆರ್. ಅನನ್ಯಾ ರೈ ಪ್ರಥಮ ಹಾಗೂ ಪುತ್ತೂರಿನ ಕುಂಬ್ರ ಮರ್ಕಝುಲ್ ಹುದಾ ಪದವಿ ಪೂರ್ವ ಕಾಲೇಜಿನ ಖದೀಜತ್ ದಿಲ್ಶಾನಾ ದ್ವಿತೀಯ ಬಹುಮಾನ ಪಡೆದಿದ್ದಾರೆ.

ಗಣಪತಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಚಂದ್ರಕಲಾ ನಂದಾವರ, ಸುರತ್ಕಲ್ ಗೋವಿಂದದಾಸ್ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರೊ. ಕೃಷ್ಣಮೂರ್ತಿ ಚಿತ್ರಾಪುರ, ಶ್ರೀನಿವಾಸ್ ಕಾಲೇಜ್ ಆಫ್ ಎಜುಕೇಶನ್ ಇದರ ಉಪನ್ಯಾಸಕರಾದ ಡಾ. ವಿಜಯಲಕ್ಷಿ ನಾಯಕ್ ಮತ್ತು ವಿಜಯ ಕರ್ನಾಟಕ ದಿನ ಪತ್ರಿಕೆಯ ಹಿರಿಯ ಉಪಸಂಪಾದಕಿ ಡಾ.ಸೀತಾಲಕ್ಷಿ ಕರ್ಕಿಕೋಡಿ ಪ್ರಬಂಧ ಸ್ಪರ್ಧೆಯ ತೀರ್ಪುಗಾರರಾಗಿದ್ದರು.

ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಬಳಿಕ ನಗರ ಪೊಲೀಸ್ ಆಯುಕ್ತರೊಂದಿಗೆ ಪತ್ರಕರ್ತರ ಸಂವಾದ ಕಾರ್ಯಕ್ರಮ ನಡೆಯಿತು.

ಪೋಲೀಸ್ ಕಮೀಷನರ್ ಟಿ.ಆರ್ ಸುರೇಶ್, ಉಮಾ ಪ್ರಶಾಂತ್ ಉಪ ಆಯುಕ್ತ, ಕಾರ್ಯನಿರತ ಪತ್ರ ಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಕಾರ್ಯದರ್ಶಿ ಇಬ್ರಾಹಿಮ್ ಅಡ್ಕ ಸ್ಥಳ ಮತ್ತಿತರರಯ ಉಪಸ್ಥಿತರಿದ್ದರು.

Related posts

Leave a Reply