Header Ads
Breaking News

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಅನುಮಾನಸ್ಪದ ಬ್ಯಾಗ್ ಒಂದು ಪತ್ತೆಯಾಗಿ ಆತಂಕಕ್ಕೆ ಕಾರಣವಾಗಿದೆ. ಅನುಮಾನಸ್ಪದ ಬ್ಯಾಗ್ ಪತ್ತೆಯಾದ ಹಿನ್ನಲೆಯಲ್ಲಿ ವಿಮಾನ ನಿಲ್ದಾಣ ಸುತ್ತಲೂ ಬಿಗಿ ಭದ್ರತೆ ಒದಗಿಸಲಾಗಿದೆ. ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರಿನ ಬಜ್ಪೆಯಲ್ಲಿರುವ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ ಸುಮಾರು 10 ಗಂಟೆಗೆ ಲ್ಯಾಪ್ ಟ್ಯಾಪ್ ಬ್ಯಾಗೊಂದು ಅನುಮಾನಸ್ಪದವಾಗಿ ಪತ್ತೆಯಾಗಿತ್ತು. ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್ ಹತ್ತಿರ ಇದು ಪತ್ತೆಯಾಗಿತ್ತು. ನಂತರ ಅಧಿಕಾರಿಗಳು ಜನರನ್ನು ಅಲ್ಲಿಂದ ದೂರ ಸರಿಸಿ ಆ ಬ್ಯಾಗನ್ನು ಅಲ್ಲಿಂದ ದೂರದಲ್ಲಿ ಇರಿಸಲಾಗಿದೆ.

Related posts

Leave a Reply

Your email address will not be published. Required fields are marked *