Header Ads
Header Ads
Breaking News

ಮಂಗಳೂರಿನ ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನಿಂದ ’ಶಕ್ತಿ ಕ್ಯಾನ್ ಕ್ರಿಯೇಟ್’ ರಜಾಕಾಲದ ಶಿಬಿರ, 6 ದಿನಗಳ ಕಾಲದಲ್ಲಿ ಶಕ್ತಿ ಕ್ಯಾನ್ ಕ್ರಿಯೇಟ್

ಮಂಗಳೂರಿನ ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜಿನ ವತಿಯಿಂದ ಶಕ್ತಿ ಕ್ಯಾನ್ ಕ್ರಿಯೇಟ್ ದಸರಾ ರಜಾಕಾಲದ ಶಿಬಿರವನ್ನು ಆಯೋಜಿಸಲಾಯ್ತು.ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಶಕ್ತಿ ಕ್ಯಾನ್ ಕ್ರಿಯೇಟ್ ದಸರಾ ರಜಾಕಾಲದ ಶಿಬಿರದ ಉದ್ಘಾಟಣೆಯನ್ನು ಸುದಾನ ವಸತಿ ಶಾಲೆ ಪುತ್ತೂರು ಇದರ ಸಂಚಾಲಕರಾದ ವಂದನೀಯ ವಿಜಯ ಹಾರ್ವಿನ್ ನೆರೆವೇರಿಸಿದರು.

ಬಳಿಕ ಮಾತನಾಡಿದ ಅವರು,ಇಂದಿನ ಮಕ್ಕಳು ಪಾಠದ ಜೊತೆ ಆಟವಾಡಬೇಕು. ಶಾಲೆಗಳು ಮಕ್ಕಳನ್ನು ಅಂಕ ಪಡೆಯಲು ತಯಾರು ಮಾಡುವ ಕೇಂದ್ರಗಳು ಆಗಬಾರದು. ದೇಶದ ಭವಿಷ್ಯದ ದೃಷ್ಠಿಯಿಂದ ಅವರ ವ್ಯಕ್ತಿತ್ವದ ವಿಕಸನದ ಕಡೆಗೆ ಗಮನ ನೀಡಬೇಕೆಂದು ಕಿವಿಮಾತು ಹೇಳಿದರು.ಮುಖ್ಯ ಅತಿಥಿಯಾಗಿ ಪಾಲಿಕೆ ಸದಸ್ಯೆ ಅಖಿಲಾ ಆಳ್ವ ಪಾಲ್ಗೊಂಡಿದ್ರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ ನಾಕ್ ವಹಿಸಿದರು. ವೇದಿಕೆಯಲ್ಲಿ ಆಡಳಿತ ಮಂಡಳಿ ಸದಸ್ಯೆ ಸಗುಣ ಸಿ. ನಾಕ್, ಪ್ರಧಾನ ಸಲಹೆಗಾರ ರಮೇಶ.ಕೆ, ಅಭಿವೃದ್ಧಿ ಅಧಿಕಾರಿ ನಸೀಮ್ ಬಾನು ಮತ್ತು ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆಯ ಸಂಚಾಲಕಿ ನೀಮಾ ಸಕ್ಸೇನಾ, ಸಂಸ್ಥೆಯ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಭಾಕರ ಜಿ.ಎಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು

Related posts

Leave a Reply