Header Ads
Header Ads
Breaking News

ಸೈಂಟ್ ಆನ್ಸ್ ಪ್ರೌಢಶಾಲೆಯಲ್ಲಿ ಪ್ರಾಚಾರ್ಯರ ಶೈಕ್ಷಣಿಕ ಸಮಾವೇಶ ಕಾರ್ಯಕ್ರಮ

ದ.ಕ. ಜಿಲ್ಲಾ ಫ್ರೌಢಶಾಲಾ ಮುಖ್ಯೋಪಧ್ಯಾಯರ ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಆಶ್ರಯದಲ್ಲಿ ಆಯೋಜಿಸಿದ ಶೈಕ್ಷಣಿಕ ಸಮಾವೇಶ ಮಂಗಳೂರಿನ ಸೈಂಟ್ ಆನ್ಸ್ ಫ್ರೌಢಶಾಲೆಯ ಸಭಾಭವನದಲ್ಲಿ ನಡೆಯಿತು.

ಮಂಗಳೂರು ವಿ.ವಿ. ಕುಲಪತಿ ಪ್ರೊ|ಪಿ.ಎಸ್.ಯಡಪಡಿತ್ತಾಯ ದ್ವೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಶಿಕ್ಷಕ ವೃತ್ತಿ ಎಂಬುದು ಕೇವಲ ಕೆಲಸ ಎಂಬ ನೆಲೆಯಲ್ಲಿ ಪರಿಗಣಿಸಬಾರದು. ಬದಲಾಗಿ ಅದು ಸೇವೆ ಎಂಬ ಮನೋಭಾವ ಶಿಕ್ಷಕರಲ್ಲಿ ಮೂಡಿದಾಗ ಜಾಗೃತ ಸಮಾಜ ನಿರ್ಮಾಣ ಸಾಧ್ಯ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರಾಥಮಿಕ ಹಾಗೂ ಫ್ರೌಢಶಾಲಾ ಶಿಕ್ಷಕರು ಈ ನಿಟ್ಟಿನಲ್ಲಿ ವಿಶೇಷ ಜವಾಬ್ದಾರಿಯನ್ನು ಪಡೆದಿದ್ದಾರೆ. ವಿದ್ಯಾರ್ಥಿಯ ಶಾರೀರಿಕ ಬೆಳವಣಿಗೆ, ಮಾನಸಿಕ ಬೆಳವಣಿಗೆ, ಬೌದ್ಧಿಕ ಬೆಳವಣಿಗೆ, ಸಾಮಾಜಿಕ ಸ್ವಸ್ಥ್ಯ ಹಾಗೂ ಆಧ್ಯಾತ್ಮಿಕ ವಿಚಾರಗಳೆಂಬ ಪಂಚ ಸೂತ್ರಗಳು ಶಿಕ್ಷಕರ ಮೂಲಕ ದೊರೆತರೆ ಪರಿಪೂರ್ಣ ವ್ಯಕ್ತಿತ್ವ ಹೊಂದಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಅರುಣ್ ಕುಮಾರ ಶೆಟ್ಟಿ, ಕೃಷ್ಣ ಶರ್ಮ, ವಸಂತ್ ದೇವಾಡಿಗ, ಲತಾ, ದಯಾನಂದ್ ಎಂ.ಕೆ, ಆರ್.ಎಸ್ ಪಲಕ್ಕಿ, ಅಶೋಕ್ ಕುಮರ್ ಶೆಟ್ಟಿ ಅವರಿಗೆ ಸನ್ಮಾನಿಸಲಾಯಿತು.ಸೈಂಟ್ ಆನ್ಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಭಗಿನಿ|ಮರಿಯ ಕೃಪ ಎ.ಸಿ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ಸತೀಶ್ ಪಿ, ಸಂಘದ ಅಧ್ಯಕ್ಷೆ ಜಯಶ್ರೀ ಜಿ.ಎಸ್, ಕಾರ್ಯದರ್ಶಿ ಮಹೇಶ್ ಶೆಟ್ಟಿ ಉಪಾಧ್ಯಕ್ಷ ಕೆಎಂಕೆ ಮಂಜನಾಡಿ ಮುಂತಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *