Header Ads
Breaking News

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯಾಗಿಲ್ಲ: ಮಾಜಿ ಶಾಸಕ ಮೊಯ್ದಿನ್ ಬಾವಾ

ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರಕ್ಕೆ ಜಿಲ್ಲೆಯ ಸಂಸದರು ಮತ್ತು ಈಗಿನ ಶಾಸಕರು ಯಾವೆಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ತಂದಿದ್ದಾರೆ ಎಂದು ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸುರತ್ಕಲ್‌ನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಸುರತ್ಕಲ್ ಉತ್ತರ ಭಾಗದಲ್ಲಿ ಅಭಿವೃದ್ಧಿಯಾಗಿದ್ದು ನನ್ನ ಶಾಸಕ ಅವಧಿಯಲ್ಲಿ ಮತ್ತು ಕಾರ್ಪೊರೇಶನ್‌ನ ವ್ಯವಸ್ಥೆಯಿಂದಾಗಿ ಹೊರತು ಸಂಸದರಾದ ನಳಿನ್ ಕುಮಾರ್ ಮತ್ತು ಶಾಸಕ ಭರತ್ ಶೆಟ್ಟಿ ಅವರಿಂದ ಅಲ್ಲ ಎಂದು ವಾಗ್ದಾಳಿ ನಡೆಸಿದರು. ಇಲ್ಲಿನ ಪ್ರಮುಖ ರಸ್ತೆ, ಮಾರುಕಟ್ಟೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಿ ಟೆಂಡರ್ ಕೂಡ ಕರೆದಾಗಿತ್ತು. ಕೆಲಸ ಆರಂಭಿಸಲಾಗಿತ್ತು. ಆದರೆ ಈಗ ಎಲ್ಲಾ ಕಾಮಗಾರಿಗಳು ಹಾಗೆಯೇ ಇದೆ. ಇದಕ್ಕೆ ಇಲ್ಲಿನ ಶಾಸಕರು ಉತ್ತರಿಸಬೇಕು ಎಂದು ಹೇಳಿದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಯುವ ನಾಯಕ ಮಿಥುನ್ ರೈ ಅವರ ಗೆಲುವು ನಿಶ್ಚಿತ. ಈಗಾಗಲೇ ಬಿರುಸಿನ ಪ್ರಚಾರವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ರಾಘವೇಂದ್ರ, ಪ್ರತಿಭಾ ಕುಳಾಯಿ, ಸದಾನಂದ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *