Header Ads
Header Ads
Breaking News

ಮಂಗಳೂರು ಎಪಿಎಂಸಿ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಜೈನ್ ಆಯ್ಕೆ:ಶಿರ್ತಾಡಿಯಲ್ಲಿ ಅಭಿನಂದನಾ ಸಮಾರಂಭ

ಮೂಡುಬಿದಿರೆ: ಮಂಗಳೂರು ತಾಲ್ಲೂಕು ಎಪಿಎಂಸಿ ಅಧ್ಯಕ್ಷರಾಗಿ ಆಯ್ಕೆಯಾದ ಪ್ರವೀಣ್ ಕುಮಾರ್ ಜೈನ್ ಅವರಿಗೆ ಅಭಿನಂದನಾ ಕಾರ್ಯಕ್ರಮವು ಶಿರ್ತಾಡಿಯ ಬ್ರಹ್ಮ ರೆಸಿಡೆನ್ಸಿ ಸಭಾಂಗಣದಲ್ಲಿ ನಡೆಯಿತು.

ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಪ್ರವೀಣ್ ಜೈನ್ ‘ಕಾಂಗ್ರೆಸ್ ಪಕ್ಷದ ಕಾರ್‍ಯಕರ್ತರ ಬೆಂಬಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹಾಗೂ ಮಾಜಿ ಸಚಿವ ಅಭಯಚಂದ್ರ ಜೈನ್ ಅವರ ಸಹಕಾರದಿಂದ ನಾನು ಎಪಿಎಂಸಿ ಅಧ್ಯಕ್ಷನಾದೆ, ನನ್ನ ಅಧಿಕಾರವಧಿಯಲ್ಲಿ ರೈತರಿಗೆ ನ್ಯಾಯ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವೆ’ ಎಂದರು.

ಸಭಾಧ್ಯಕ್ಷತೆ ವಹಿಸಿ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್ ‘ನಾಲ್ಕು ಬಾರಿ ಗ್ರಾಮ ಪಂಚಾಯತಿ ಸದಸ್ಯರಾಗಿ, ಒಂದುಬಾರಿ ಎಪಿಎಂಸಿ ಸದಸ್ಯರಾಗಿ ಚುನಾಯಿತರಾದ ಪ್ರವೀಣ್ ಜೈನ್ ಮಂಗಳೂರು ಎಪಿಎಂಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಅವರ ಜನಪ್ರತಿನಿಧಿಯಾಗಿ ಅವರು ಸಲ್ಲಿಸಿದ ಪ್ರಾಮಾಣಿಕ ಸೇವೆಗೆ ಸಂದ ಗೌರವ. ಕೃಷಿಕರಿಗೆ ನ್ಯಾಯ ಒದಗಿಸುವ ಕೆಲಸ ಅವರ ಅವಧಿಯಲ್ಲಿ ಆಗುತ್ತದೆ ಎಂಬ ವಿಶ್ವಾಸ ನನಗಿದೆ’ ಎಂದರು.

ಈ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಕೋಟ್ಯಾನ್, ಶಿರ್ತಾಡಿ ಸಂಪತ್ ಸಾಮ್ರಾಜ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಯುವ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ್ ಸನಿಲ್, ಎಪಿಎಂಸಿ ಸದಸ್ಯರಾದ ಪೌಸ್ತಿನ್ ಸಿಕ್ವೇರಾ ಉಪಸ್ಥಿತರಿದ್ದರು.

Related posts

Leave a Reply