Header Ads
Header Ads
Header Ads
Breaking News

ಮಂಗಳೂರು ಗಲಭೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಮಾಡಿದವರ ಆಸ್ತಿಯನ್ನು ಜಪ್ತಿ ಮಾಡಬೇಕು : ಸಚಿವ ಸಿಟಿ ರವಿ ಹೇಳಿಕೆ

ಮಂಗಳೂರು ಗಲಭೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಮಾಡಿದವರ ಆಸ್ತಿಯನ್ನು ಜಪ್ತಿ ಮಾಡಬೇಕು. ಉತ್ತರ ಪ್ರದೇಶ ಮಾದರಿಯಲ್ಲಿ ರಾಜ್ಯ ಸರ್ಕಾರ ನಡೆದುಕೊಳ್ಳಬೇಕು.ಕಿಡಿಗೇಡಿಗಳ ಮೇಲೆ ಪುಂಡು ಕಂದಾಯ ಹೇರಬೇಕು. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪಗೆ ಮನವಿ ಮಾಡುತ್ತೇನೆ ಎಂದು ಮಂಗಳೂರಿನಲ್ಲಿ ಸಚಿವ ಸಿ.ಟಿ. ರವಿ ಹೇಳಿದರು.

ಅವರು ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಗಲಭೆಯಲ್ಲಿ ಅಮಾಯಕರು ಸತ್ರೆ ಪರಿಹಾರ ನೀಡುತ್ತೇವೆ. ಕ್ರಿಮಿನಲ್ ಚಟುವಟಿಕೆ ಭಾಗವಹಿಸಿದ್ರೆ ಪರಿಹಾರ ಕೊಡಬೇಕಾ ಎಂದು ಕಾಂಗ್ರೆಸ್ ಈ ಬಗ್ಗೆ ಸ್ಪಷ್ಟಪಡಿಸಬೇಕು ಎಂದರು. ಪಿಎಫ್‌ಐ, ಎಸ್‌ಡಿಪಿಐ ಜೊತೆ ಕಾಂಗ್ರೆಸ್ ಒಳ ಒಪ್ಪಂದ ಮಾಡಿದೆ. ಸರ್ಕಾರವನ್ನು ಅಸ್ತಿರತೆಗೆ ತರಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆಕಾಂಗ್ರೆಸ್ ಗೆ ಚುನಾವಣೆ ಸೋತಾಗ ಇವಿಎಂ ಮೇಲೆ ಅನುಮಾನವಿದೆ. ಈಗ ಪೊಲೀಸರ ಮೇಲೆ ಅನುಮಾನ ಪಡುತ್ತಿದ್ದಾರೆ. ಕಾಂಗ್ರೆಸ್ ಅನುಮಾನ ಪಡೋದು ಕೆಟ್ಟ ಚಾಳಿ ಎಂದು ಸಚಿವ ಸಿ.ಟಿ. ರವಿ ಹೇಳಿದರು.

Related posts

Leave a Reply

Your email address will not be published. Required fields are marked *