Header Ads
Breaking News

ಮಂಗಳೂರು ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು : ಅಭಯಚಂದ್ರ ಜೈನ್ ಹೇಳಿಕೆ

ಮೂಡುಬಿದಿರೆ : ಪೌರತ್ವ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆದ ಹೋರಾಟದ ವೇಳೆ ಪ್ರತಿಭಟನಕಾರರ ಮೇಲೆ ಲಾಠಿ ಪ್ರಹಾರ ನಡೆಸಿದಲ್ಲದೆ, ಗೋಲಿಬಾರ್ ಮಾಡಿ ಇಬ್ಬರ ಸಾವಿಗೆ ಕಾರಣರಾದ ಪ್ರಕರಣದಲ್ಲಿ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ಆಗ್ರಹಿಸಿದ್ದಾರೆ.

ಅವರು ಮೂಡುಬಿದಿರೆ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ರಾಜ್ಯದ ಇತರ ಜಿಲ್ಲೆಗಳಲ್ಲಿ ನಡೆದ ಪ್ರತಿಭಟನೆಗಳನ್ನು ಅಲ್ಲಿನ ಪೊಲೀಸರು ಶಾಂತಿಯುತವಾಗಿ ನಿಭಾಯಿಸಿಸಲು ಸಾಧ್ಯವಾಗಿದ್ದರೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸರ ತಾರತಮ್ಯ ನೀತಿಯಿಂದ ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಲು ಕಾರಣವಾಯಿತು. ಗುಂಡು ಹಾರಾಟ ಪೂರ್ವ ನಿಯೋಜಿತ ಕೃತ್ಯ. ಪೊಲೀಸರು ಆಯ್ದ ಸಿಸಿ ಕೆಮರಾಗಳ ಫೂಟೇಜ್‌ಗಳನ್ನು ಮಾತ್ರ ಬಹಿರಂಗ ಪಡಿಸಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದರು. ಮಂಗಳೂರು ಗಲಭೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ನೇತ್ರತ್ವದಲ್ಲಿ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು. ಸಿಪಿಐ(ಎಂ) ಮುಖಂಡ ಯಾದವ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *