Breaking News

ಮಂಗಳೂರು ಪಾಲಿಕೆ ವಿಶ್ವ ಪರಿಸರ ದಿನಾಚರಣೆ, ಹಸಿರಾಗಿಸಲು, ತ್ಯಾಜ್ಯ ವಿಂಗಡನೆಗೆ ಚಾಲನೆ


ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಹಸಿರೀಕರಣ ಹಾಗೂ ಮೂಲದಲ್ಲಿಯೇ ತ್ಯಾಜ್ಯವನ್ನು ವಿಂಗಡಿಸುವ ಕಾರ್ಯಕ್ಕೆ ಚಾಲನೆ ದೊರೆಯಿತು.
ಮಂಗಳೂರಿನ ಪುರಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮೇಯರ್ ಕವಿತಾ ಸನಿಲ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಮೇಯರ್, ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು. ಇಂತಹ ಕಾರ್ಯಕ್ರಮ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು ಎಂದು ಹೇಳಿದರು. ಈ ವೇಳೆ ಕಾರ್ಪೋರೇಟರ್ ಗಳಾದ ಶಶಿದರ ಹೆಗ್ಡೆ, ಸಬಿತಾ ಮಿಸ್ಕಿತ್, ನಾಗವೇಣಿ, ಅಬ್ದುಲ್ ರವೂಫ್, ನವೀನ್ ಡಿಸೋಜ, ಶೈಲಜಾ, ಪಾಲಿಕೆ ಆಯುಕ್ತ ಮಹಮ್ಮದ್ ನಜೀರ್ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ೧೦೩ ಪೌರ ಕಾರ್ಮಿಕರಿಗೆ ಆರೋಗ್ಯ ವಿಮೆಯನ್ನು ವಿತರಿಸಲಾಯಿತು.

Related posts

Leave a Reply