
ದಿನನಿತ್ಯ ಒಂದಲ್ಲ ಒಂದು ರೀತಿಯ ಸಂಚಲನ ಮೂಡಿಸ್ತಾ ಇರೋ ಮಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಮಂಗಳೂರಿಗೆ ಕಮಿಷನರ್ ಆಗಿ ಜಾಯಿನ್ ಆದ ದಿನದಿಂದಲೇ ಕಾನೂನು ಸುವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಪಾಲಿಸಿ ಹೆಸರುವಾಸಿಯಾಗಿರೋ ಶಶಿಕುಮಾರ್ ಇದೀಗ ಭಕ್ತಿಗೀತೆ ಹಾಡುವ ಮೂಲಕ ಸಾರ್ವನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಹೌದು… ನಗರದ ಪಾಂಡೇಶ್ವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಸುಶ್ರಾವ್ಯವಾಗಿ ಭಕ್ತಿಗೀತೆ ಹಾಡಿರುವ ನೂತನ ಪೊಲೀಸ್ ಕಮಿಷನರ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗ್ತಾ ಇದೆ.