Header Ads
Breaking News

ಮಂಗಳೂರು ಬಾಂಬ್ ಷಡ್ಯಂತ್ರವನ್ನು ಬಯಲಿಗೆಳೆಯುವಂತೆ ಆಗ್ರಹ : ಪುತ್ತೂರಿನಲ್ಲಿ ಎಸ್‌ಡಿಪಿಐನಿಂದ ಪ್ರತಿಭಟನೆ

ಮಂಗಳೂರು ಬಾಂಬ್ ಷಡ್ಯಂತ್ರವನ್ನು ಬಯಲಿಗೆಳೆಯುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಪುತ್ತೂರು ಬಸ್ಸು ನಿಲ್ದಾಣದ ಬಳಿಯಲ್ಲಿ ಪ್ರತಿಭಟನಾ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಪಿಎಫ್‌ಐ ಪುತ್ತೂರು ಜಿಲ್ಲಾಧ್ಯಕ್ಷ ಜಾಬಿರ್ ಅರಿಯಡ್ಕ ಅವರು ಪುತ್ತೂರು ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಭಯೋತ್ಪಾಧನಾ ಕೇಂದ್ರವಾಗುತ್ತಿದೆ. ಈಶ್ವರಮಂಗಲದಲ್ಲಿ ಪತ್ತೆಯಾದ ಸ್ಪೋಟಕ ಸಾಮಾಗ್ರಿ ತಯಾರಿಕೆ ಸೇರಿದಂತೆ ಮಂಗಳೂರಿನಲ್ಲಿ ನಡೆದ ಬಾಂಬ್ ಸ್ಪೋಟ ಯತ್ನ ಎಲ್ಲದರ ಬಗ್ಗೆಯೂ ಸಮಗ್ರ ತನಿಖೆಯಾಗಬೇಕಾಗಿದೆ. ಇದರ ಹಿಂದಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಶಿಕ್ಷೆ ನೀಡಬೇಕು. ಹೀಗೇ ಮುಂದುವರಿದಲ್ಲಿ ಪುತ್ತೂರಿಗೆ ಬಹುದೊಡ್ಡ ಅಪಾಯವಾಗುವ ಸಂಭವವಿದೆ. ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಇಕ್ಬಾಲ್ ಬೆಳ್ಳಾರೆ, ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಕೆ.ಎ. ಸಿದ್ದೀಕ್, ಉಪಾಧ್ಯಕ್ಷ ಇಬ್ರಾಹಿಂ ಸಾಗರ್, ಕಾರ್ಯದರ್ಶಿ ಅಶ್ರಫ್ ಬಾವು, ಜೊತೆ ಕಾರ್ಯದರ್ಶಿ ಯಹ್ಯಾ ಕೂರ್ನಡ್ಕ ಮತ್ತಿತರರು ಪಾಲ್ಗೊಂಡಿದ್ದಾರೆ.

Related posts

Leave a Reply

Your email address will not be published. Required fields are marked *