Header Ads
Header Ads
Header Ads
Breaking News

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‍ರಿಂದ ಮತದಾನ

ಮಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ ಚಲಾಯಿಸಿದರು. ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್‍ಗಳಿಗೆ ಮತದಾನ ನಡೆಯಲಿದೆ. ಈ ಹಿನ್ನೆಲೆ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ಹಕ್ಕು ಚಲಾಯಿಸಿದ್ದಾರೆ. ಇದೇ ಸಂದರ್ಭ ಮಾಧ್ಯಮದೊಂದಿಗೆ ಮತನಾಡಿದ ಅವರು, ಪಾಲಿಕೆಯ 60 ವಾರ್ಡ್‍ಗಳಲ್ಲಿಯೂ ಬಿಜೆಪಿ ಸ್ಪರ್ಧೆ ಮಾಡಿದೆ. ಕಾಂಗ್ರೆಸ್ ಆಡಳಿತದಿಂದ ಬೇಸತ್ತು ಈ ಬಾರಿ ಮತದಾರರು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ ಎಂದಬ ಭರವಸೆ ಇದೆ ಎಂದು ಹೇಳಿದರು.

ಕಾಂಗ್ರೆಸ್ ಮತ್ತು ಬಿಜೆಪಿ ಎಲ್ಲ 60 ವಾರ್ಡ್‍ಗಳಿಗೂ ಅಭ್ಯರ್ಥಿ ನಿಲ್ಲಿಸಿದ್ದು, ಪೈಪೋಟಿಯಲ್ಲಿದೆ ಸ್ಪರ್ಧೆ. ಜೆಡಿಎಸ್ ಈ ಬಾರಿ 12 ಸ್ಥಾನಗಳಿಗೆ ಸ್ಪರ್ಧಿಸಿದೆ. ಒಟ್ಟು 448 ಮತಗಟ್ಟೆಗಳಿದ್ದು, 3,87,517 ಮತದಾರರು ಮತ ಚಲಾಯಿಸಲಿದ್ದಾರೆ. ಹೀಗಾಗಿ ಮಂಗಳೂರು ನಗರ ಭಾಗದ ಜನ ಯಾರನ್ನು ಅಧಿಕಾರಕ್ಕೇರಿಸಲಿದ್ದಾರೆ ಅನ್ನುವುದು ಕಾದು ನೋಡಬೇಕು.

Related posts

Leave a Reply

Your email address will not be published. Required fields are marked *