Header Ads
Header Ads
Breaking News

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ : ಶಾಸಕ ವೇದವ್ಯಾಸ್ ಕಾಮತ್ ಅವರಿಂದ ಮತಚಲಾವಣೆ

ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ತಮ್ಮ ಮತವನ್ನು ಚಲಾಯಿಸಿದ್ದಾರೆ.ಇಂದು ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದ್ದು, ಮತದಾರರು ತಮ್ಮ ನೆಚ್ಚಿನ ಅಭ್ಯರ್ಥಿಗೆ ಮತ ಚಲಾಯಿಸುತ್ತಿದ್ದಾರೆ. ಮತಗಟ್ಟೆಯ ಸುತ್ತ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ನಗರದ ಮಣ್ಣಗುಡ್ಡೆಯ ಗಾಂಧಿ ನಗರ ಶಾಲೆಯಲ್ಲಿ ಶಾಸಕ ಕಾಮತ್ ತಮ್ಮ ಪತ್ನಿ ವೃಂದಾ ಕಾಮತ್ ಅವರೊಂದಿಗೆ ತೆರಳಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.ಬಳಿಕ ಮಾತನಾಡಿದ ಶಾಸಕ ಕಾಮತ್, ಮತದಾನ ಎನ್ನುವುದು ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕು. ಆಯಾ ಕ್ಷೇತ್ರದ ಅಭಿವೃದ್ದಿಯ ದೃಷ್ಟಿಯಲ್ಲಿ ಮಂಗಳೂರಿನ ನಾಗರಿಕರೆಲ್ಲರೂ ತಪ್ಪದೆ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ವಿನಂತಿಸಿದರು.

Related posts

Leave a Reply

Your email address will not be published. Required fields are marked *