Header Ads
Header Ads
Breaking News

ಮಂಗಳೂರು ಮಾತಾ ಅಮೃತಾನಂದಮಯಿ ವಿದ್ಯಾಲಯಂನಲ್ಲಿ 63ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ

ಮಂಗಳೂರು ಮಾತಾ ಅಮೃತಾನಂದಮಯಿ ವಿದ್ಯಾಲಯಂನಲ್ಲಿ 63ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಂಗಳೂರಿನ ಹೆಸರಾಂತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ನಗರದ ಮಾತಾ ಅಮೃತಾನಂದಮಯಿ ವಿದ್ಯಾಲಯಂನಲ್ಲಿ 63ನೇ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ವೇಳೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಗೋವಿಂದದಾಸ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರೊ. ಪಿ. ಕೃಷ್ಣಮೂರ್ತಿ ಅವರು ಧ್ವಜಾರೋಹಣ ನೆರೆವೇರಿಸಿದರು. ಬಳಿಕ ಮಾತನಾಡಿದ ಅವರು, ಕನ್ನಡ ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪರಿಶ್ರಮ ವಹಿಸಬೇಕು ಆ ಮೂಲಕ ಕನ್ನಡ ಭಾಷೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಹೇಳಿದರು. ಶಾಲಾ ವಿದ್ಯಾರ್ಥಿ ಅನೂಪ್ ಪೈ ಅವರು ಕನ್ನಡ ರಾಜ್ಯೋತ್ಸವದ ಆಚರಣೆ ಮಹತ್ವದ ಬಗ್ಗೆ ಭಾಷಣವಿತ್ತರು.ಕಾರ್ಯಕ್ರಮದಲ್ಲಿ ಶಾಲಾ ಉಪ ಪ್ರಾಂಶುಪಾಲೆ ಅನುಪಮಾ ರಾವ್ ಅವರು ಮಾತನಾಡಿ, ಮಾತಾ ಅಮೃತಾನಂದಮಯಿ ಸಂಸ್ಥೆಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.ವಿದ್ಯಾರ್ಥಿಗಳು ಪ್ರಾರ್ಥನೆ ಹಾಗೂ ನಾಡಗೀತೆ ಹಾಡಿ ಕಾರ್ಯಕ್ರಮಕ್ಕೆ ಶೋಭೆ ತಂದುಕೊಟ್ಟರು. ವಿದ್ಯಾರ್ಥಿನಿ ಮನ್ವಿತಾ ಮತ್ತು ವಿದ್ಯಾರ್ಥಿ ಗರುಪ್ರಿತ್ ತಮ್ಮ ಹಾಡಿನ ಮೂಲಕ ಕನ್ನಡ ನಾಡು ನುಡಿಯ ಸೊಬಗನ್ನು ಬಣ್ಣಿಸಿದರು. ಇದೇ ವೇಳೆ ವಿದ್ಯಾರ್ಥಿಗಳು ಕನ್ನಡ ನಾಡಿನ ವೀರ ವನಿತೆ ಓಬವ್ವಳ ಚರಿತ್ರೆಯನ್ನು ನೃತ್ಯದ ಮೂಲಕ ಪ್ರಸ್ತುತಪಡಿಸಿದರು. ಮಾತ್ರವಲ್ಲದೆ ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಕಾರ್ಯಕ್ರಮ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಈ ವೇಳೆ ಶಿಕ್ಷಕ ಶಿಕ್ಷಕೇತರ ವೃಂದದ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

Leave a Reply